- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡದ ಹಿರಿಯ ನಟ, ನಿರ್ದೇಶಕ ಎಸ್. ನಾರಾಯಣ್ ಕುಟುಂಬದಲ್ಲಿ ಬಿರುಗಾಳಿ ಎದ್ದಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಕ್ಷಿಣೆ ಕಿರುಕುಳ ಆರೋಪ ಪ್ರಕರಣದಲ್ಲಿ ನಿರ್ದೇಶಕ, ನಟ ಎಸ್.ನಾರಾಯಣ್ ವಿರುದ್ದ FIR ದಾಖಲಾಗಿದೆ.
ಎಸ್.ನಾರಾಯಣ್ ವಿರುದ್ದ ಸೊಸೆ ಪವಿತ್ರ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ, ಅತ್ತೆ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪ ಪ್ರಕರಣದಲ್ಲಿ ಪವನ್ ಮೊದಲ ಆರೋಪಿ ಆಗಿದ್ದರೆ, ಎಸ್.ನಾರಾಯಣ್ A2, ಅತ್ತೆ ಭಾಗ್ಯವತಿ 3ನೇ ಆರೋಪಿಯಾಗಿದ್ದಾರೆ.

pawan1

ಎಸ್.ನಾರಾಯಣ್ ಸೊಸೊ ಪವಿತ್ರಾ ಆರೋಪಗಳೇನು? ನನ್ನ ಪತಿ ಪವನ್ ಓದಿಲ್ಲ, ಹೀಗಾಗಿ ಎಲ್ಲಿಯೂ ಕೆಲಸ ಸಿಗ್ತಿರಲಿಲ್ಲ. ನಾನೇ ಎಲ್ಲಾ ಕೆಲಸ ಮಾಡಿ ಮನೆಯ ಸಂಸಾರ ಸಾಗಿಸುತ್ತಿದ್ದೆ. ಇದರ ಮಧ್ಯೆ ‘ಕಲಾ ಸಾಮ್ರಾಟ್ ಟೀಂ ಅಕಾಡಮಿ’ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಮಾಡಲಾಗಿತ್ತು. ಅದನ್ನು ಆರಂಭಿಸಲು ಪವನ್, ನಮ್ಮ ಬಳಿ ಹಣ ಕೇಳಿದ್ದ. ಆಗ ನಾನು ತಾಯಿಯ ಒಡವೆಗಳನ್ನ ಅಡವಿಟ್ಟು ಹಣ ಕೊಟ್ಟಿದ್ದೆ. ಕೊನೆಗೆ ಆ ಸಂಸ್ಥೆ ಲಾಸ್ ಆಗಿ ಮುಚ್ಚಲಾಯಿತು. ಅಲ್ಲಿ ಆಗಿರುವ ನಷ್ಟ ತುಂಬಿಸಿಕೊಳ್ಳಲು ನಾನು 10 ಲಕ್ಷ ರೂಪಾಯಿ ಸಾಲ ಮಾಡಿ ಪವನ್ಗೆ ನೀಡಿದ್ದೆ.
ಇಷ್ಟೆಲ್ಲ ಆದರೂ ಪ್ರತಿ ದಿನ ಅತ್ತೆ ಭಾಗ್ಯಲಕ್ಷ್ಮಿ (ಎಸ್.ನಾರಾಯಣ್ ಪತ್ನಿ) ಹಾಗು ಪತಿ ನನ್ನ ಮೇಲೆ ಹಲ್ಲೆ ನಡೆಸಿ ಹಣ ತರುವಂತೆ ಒತ್ತಾಯ ಮಾಡಿದ್ದಾರೆ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಅತ್ತೆ ಭಾಗ್ಯಲಕ್ಷ್ಮಿ ಹಾಗು ಪತಿ ನನ್ನ ಮನೆಯಿಂದ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಮದುವೆ ಅವಧಿಯಲ್ಲಿ ಒಂದು ಲಕ್ಷದ ಉಂಗುರ ಹಾಗೂ ಖರ್ಚು-ವೆಚ್ಚದ ಹಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ಮಗನಿಗೆ ತೊಂದರೆಯಾದರೆ ಎಸ್.ನಾರಾಯಣ್, ಭಾಗ್ಯಲಕ್ಷ್ಮಿ ಹಾಗೂ ಪವನ್ ಕಾರಣ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸರು ಈ ವಿಚಾರಗಳನ್ನು ಎಫ್ಐಆರ್ನಲ್ಲಿ ಉಲ್ಲೇಖ ಮಾಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ