ಜಾಗೀರ್ದಾರ್*

'ಪೀಟರ್' ಸಿನಿಮಾ ತನ್ನ ಕಂಟೆಂಟ್ ಮೂಲಕ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಚಿತ್ರದ ಹಾಡುಗಳ ಮೇಲೆ ನಿರೀಕ್ಷೆ ಕೂಡ ಹೆಚ್ಚಿಸುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಗಾಯಕ ಪ್ರಣವಂ ಸಸಿಯಿಂದ ಹಾಡು ಹಾಡಿಸಿದ್ದ ಚಿತ್ರತಂಡವೀಗ ಮತ್ತೊಂದು ಹಾಡಿಗೆ ಬಾಲಿವುಡ್ ಗಾಯಕರನ್ನು ಕರೆಸಿದೆ.

ಪೀಟರ್ ಗಾಗಿ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಿರ್ದೇಶಕ ಅಜಯ್ ಗೋಗವಾಲೆ ಕನ್ನಡ‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಿಂದಿಯ ಪ್ರಭಾಸ್ ನಟನೆಯ ಆದಿ ಪುರುಷ್, ಅಮೀರ್ ಖಾನ್ ನಟನೆಯ ಪೀ ಕೆ , ಶಾರುಖ್ ನಟನೆಯ ಝೀರೋ ಮತ್ತು ಹಲವಾರು ದಿಗ್ಗಜರ ಚಿತ್ರಗಳಿಗೆ ಸಂಗೀತ ನಿರ್ದೇಶಿಸಿ ಹಾಡಿರುವ ಅಜಯ್ ಗೋಗವಲೆ ಈಗ ಕನ್ನಡದ ಪೀಟರ್ ಚಿತ್ರದ ಹಾಡಿಗೆ ಧ್ವನಿಯಾಗಿದ್ದಾರೆ.

ಮಡಿಕೇರಿಯ ಸುತ್ತ ಮುತ್ತ ನಡೆಯುವ ಸಸ್ಪೆನ್ಸ್ ಡ್ರಾಮಾ ಪೀಟರ್. ಚಿತ್ರಕ್ಕೆ ಸುಕೇಶ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಪೀಟರ್ ಸಿನಿಮಾದಲ್ಲಿ ರಾಜೇಶ್ ಧ್ರುವ, ಜಾಹ್ನವಿ ರಾಯಲ, ರವೀಕ್ಷಾ ಶೆಟ್ಟಿ,ಪ್ರತಿಮಾ ನಾಯಕ್, ರಘು ಪಾಂಡೇಶ್ವರ್, ರಾಮ ನಾಡಗೌಡ, ವರುಣ್ ಪಟೇಲ್ ತಾರಾಬಳಗದಲ್ಲಿದ್ದಾರೆ.

Peter 1

ಕನ್ನಡ ಚಿತ್ರರಂಗದ ಸೌಂಡ್ ಇಂಜಿನಿಯರ್ ರವಿ ಹೀರೆಮಠ್ ಹಾಗೂ ರಾಕೇಶ್ ಹೆಗಡೆ ವೃದ್ಧಿ ಸ್ಟುಡಿಯೊಸ್ ಬ್ಯಾನರ್ ನಡಿ ಪೀಟರ್ ಸಿನಿಮಾ ನಿರ್ಮಿಸಿದ್ದಾರೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ನವೀನ್ ಶೆಟ್ಟಿ ಸಂಕಲನ, ದೇವರಾಜ್ ಕಲಾ ನಿರ್ದೇಶನ ಚಿತ್ರಕ್ಕಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ