- ರಾಘವೇಂದ್ರ ಅಡಿಗ ಎಚ್ಚೆನ್.

ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಎಳೆದು ತರುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳ ನಡುವೆ ನಟ ಪ್ರಕಾಶ್ ರಾಜ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಚಿನ್ನಯ್ಯ ಎಂಬಾತ ತಮ್ಮೊಂದಿಗೆ ದೂರವಾಣಿ ಮೂಲಕ ಸಂಪರ್ಕ ಸಾಧಿಸಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು, ಧರ್ಮಸ್ಥಳದ ವಿರುದ್ಧ ಯಾವುದೇ ಷಡ್ಯಂತ್ರದಲ್ಲಿ ತಾವು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಕಾಶ್ ರಾಜ್, ಕೋರ್ಟ್‌ನಲ್ಲಿ ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.

‘ಗಿರೀಶ್ ಮಟ್ಟಣ್ಣನವರ್ ಹೇಳಿದಂತೆ ಕೇಳಿದರೆ ನಾನು ನಿನ್ನನ್ನು ಅಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದೆ ಎಂದು ಚಿನ್ನಯ್ಯ ಹೇಳಿದ್ದಾನೆ. ಕೇರಳದಿಂದ ಹಣ ಬಂದಿದೆ ಎಂದು ಹೇಳುತ್ತಾ ನನ್ನ ಹೆಸರನ್ನೂ ಪ್ರಸ್ತಾಪಿಸಿದ್ದಾನೆ. ಆದರೆ ನಾನು ಇದುವರೆಗೆ ಧರ್ಮಸ್ಥಳಕ್ಕೆ ಹೋಗಿಲ್ಲ. ಗಿರೀಶ್ ಮಟ್ಟಣ್ಣನವರ್ ಅವರನ್ನು ಕೂಡ ಭೇಟಿಯಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಕೇಳಿಬಂದಾಗ, ಸಾಮಾಜಿಕ ಕಾರ್ಯಕರ್ತನಾಗಿ ಎಸ್‌ಐಟಿ ರಚನೆಗೆ ಮಾತ್ರ ಆಗ್ರಹಿಸಿದ್ದೆ ಎಂದು ಹೇಳಿದರು.

‘ಆ ಸಮಯದಲ್ಲಿ ಒಬ್ಬ ವ್ಯಕ್ತಿ ಕರೆ ಮಾಡಿ ತಾನು ಚಿನ್ನಯ್ಯ ಎಂದು ಪರಿಚಯಿಸಿಕೊಂಡ. ಆತ ನನ್ನೊಂದಿಗೆ ತಮಿಳಿನಲ್ಲಿ ಮಾತನಾಡಿದ್ದ. ಆ ವಿಚಾರವನ್ನು ತಕ್ಷಣವೇ ಪ್ರಣವ್ ಮೊಹಂತಿ ಅವರಿಗೆ ತಿಳಿಸಿದ್ದೆ. ಚಿನ್ನಯ್ಯ ಮಂಡ್ಯ ಮೂಲದವನು ಎಂದು ಗೊತ್ತಿದ್ದರೂ, ಆತ ತಮಿಳಿನಲ್ಲೇ ಮಾತನಾಡಿದ್ದ’ ಎಂದು ವಿವರಿಸಿದರು.

‘ನಾನು ಏನೇ ಪ್ರಶ್ನೆ ಕೇಳಿದರೂ ಹಿಂದೂ ವಿರೋಧಿ ಎಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ. ಆದರೆ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ನಾನು ಧರ್ಮಸ್ಥಳಕ್ಕೆ ಹೋಗಿಲ್ಲ. ಹಾಗಿರುವಾಗ ಧರ್ಮಸ್ಥಳದ ವಿರುದ್ಧ ನಾನು ಯಾಕೆ ಷಡ್ಯಂತ್ರ ನಡೆಸಬೇಕು?’ ಎಂದು ಪ್ರಶ್ನಿಸಿದರು.

ತನ್ನನ್ನು ಭೇಟಿಯಾಗಲು ಚಿನ್ನಯ್ಯ ಕೇಳಿದ್ದರೂ, ಭೇಟಿಗೆ ನಿರಾಕರಿಸಿದ್ದಾಗಿ ಹೇಳಿದ ಪ್ರಕಾಶ್ ರಾಜ್, ‘ಹೇಳಬೇಕಾದ ವಿಷಯ ಇದ್ದರೆ ಅದನ್ನು ರೆಕಾರ್ಡ್ ಮಾಡಿ ಕಳುಹಿಸು ಎಂದು ಹೇಳಿದ್ದೆ. ಅಲ್ಲದೆ ಪ್ರಣವ್ ಮೊಹಂತಿ ಅವರನ್ನು ಸಂಪರ್ಕಿಸುವಂತೆ ಸೂಚಿಸಿದ್ದೆ’ ಎಂದು ತಿಳಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ