-  ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗದ ಹಿರಿಯ ಸಂಗೀತ ನಿರ್ದೇಶಕ ಹಾಗೂ ಗೀತ ಸಾಹಿತಿ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಖುದ್ದು ಹಂಸಲೇಖ ಅವರೇ ಅದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಅವರು, ಪ್ರಶಸ್ತಿಗಿಂತ ಕನ್ನಡದ ಹಕ್ಕಿನ ಹೋರಾಟವೇ ಇಂದು ಹೆಚ್ಚು ಮುಖ್ಯ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಹಂಸಲೇಖ, “ಕನ್ನಡದಾಣೆ, ಇದಕ್ಕೆ ನನ್ನ ಒಪ್ಪಿಗೆ ಇಲ್ಲ. ಇದು ಅನಗತ್ಯವಾದ ಅಭಿಮಾನದ ದುಡುಕು ಮತ್ತು ಪ್ರೀತಿಯ ತೊಂದರೆ. ಸೀನ್‌ಗೂ, ಟ್ಯೂನ್‌ಗೂ, ಲಿರಿಕ್ಸ್‌ಗೂ ಹೊಂದಾಣಿಕೆಯೇ ಇಲ್ಲ. ಫ್ಲಾಪ್ ಸಾಂಗಿದು… ದಯವಿಟ್ಟು ನಿಲ್ಲಿಸಿ, ನೆನಪಿರಲಿ ಪ್ರೀತಿಯ ಪ್ರೇಮ್” ಎಂದು ಬರೆದುಕೊಂಡಿದ್ದಾರೆ.

ಪ್ರಶಸ್ತಿಗಾಗಿ ನಡೆಯುತ್ತಿರುವ ಅಭಿಯಾನಕ್ಕಿಂತ ಕನ್ನಡ ಭಾಷೆಯ ಹಕ್ಕು ಮತ್ತು ಅಸ್ತಿತ್ವದ ಪರವಾಗಿ ಜನಜಾಗೃತಿ ಮೂಡಿಸುವುದು ಇಂದಿನ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡ ನಮ್ಮ ಹಕ್ಕಿನ ಭಾಷೆ. ಈ ಸತ್ಯವನ್ನು ಪ್ರತಿದಿನವೂ ಸಾಬೀತುಪಡಿಸಬೇಕಾದ ಸಮಯದಲ್ಲಿದ್ದೇವೆ. ಅದಕ್ಕೆ ಬೇಕಾಗಿರುವುದು ಅಭಿಮಾನದ ಅಭಿಯಾನಗಳು” ಎಂದು ಹೇಳುವ ಮೂಲಕ ಕನ್ನಡಪರ ಚಳವಳಿಗಳಿಗೆ ತಮ್ಮ ಆದ್ಯತೆ ನೀಡಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಐದು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗಕ್ಕೆ ಸಾವಿರಾರು ಅಮರ ಗೀತೆಗಳನ್ನು ನೀಡಿರುವ ಹಂಸಲೇಖ, ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರಗಳಿಗೂ ಸಂಗೀತ ನೀಡಿದ್ದಾರೆ. ಅವರ ಸಾಧನೆಯನ್ನು ಗಮನಿಸಿ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ನಟ ನೆನಪಿರಲಿ ಪ್ರೇಮ್ ಇತ್ತೀಚೆಗೆ ಅಭಿಯಾನ ಆರಂಭಿಸಿದ್ದರು

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ