Sj*

ಅಕ್ಷಿ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದು ಸ್ಯಾಂಡಲ್‌ವುಡ್‌ನಲ್ಲಿ ಗಮನ ಸೆಳೆದಿದ್ದ ನಿರ್ದೇಶಕ ಮನೋಜ್ ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಸೇರಿದಂತೆ ಎಲ್ಲಾ ಹಾಡುಗಳು ಈಗಾಗಲೇ ದೊಡ್ಡ ಹಿಟ್‌ ಆಗಿವೆ. ಇದೀಗ

ಈ ಚಿತ್ರದ ಹೊಸ ಹಾಡು ಬಿಡುಗಡೆಯಾಗಿದೆ.

premada

"ಬಾನಲಿ ಜಾರಿದ..." ಎಂಬ ಈ ಸುಮಧುರ ಪ್ರಣಯ ಯುಗಳ ಗೀತೆಯಲ್ಲಿ ನಾಯಕ ಶ್ರೀರಾಮ್ (ಸಂತೋಷ್) ಹಾಗೂ ನಟಿ ತಪಸ್ವಿನಿ ಪೂಣಚ್ಚ (ರುಕ್ಮಿಣಿ) ಜೋಡಿಯಾಗಿ ಕಣ್ಮನ ಸೆಳೆದಿದ್ದು, ತಪಸ್ವಿನಿ ಅವರ ಮುದ್ದಾದ ಅಭಿನಯಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪ್ರೀತಿಯಲ್ಲಿ ಬೀಳುವ ಸುಂದರ ಭಾವನೆಗಳನ್ನು ಕಾವ್ಯಾತ್ಮಕವಾಗಿ ಕಟ್ಟಿಕೊಟ್ಟಿರುವ ಈ ಹಾಡಿಗೆ ಅಭಿಜಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿದ್ದು, ಸುನಾದ ಗೌತಮ್ ಅವರ ಸಂಗೀತ ನಿರ್ದೇಶನದಲ್ಲಿ ನಿನಾದ ನಾಯಕ್ ಮತ್ತು ರಜತ್ ಹೆಗ್ಡೆ ಧ್ವನಿಯಾಗಿದ್ದಾರೆ.

ಚಿತ್ರದಲ್ಲಿ ಶ್ರೀರಾಮ್ ನಾಯಕನಾಗಿ ನಟಿಸಿದ್ದು, ಅವರಿಗೆ ನಾಯಕಿಯರಾಗಿ ತಪಸ್ವಿನಿ ಪೂಣಚ್ಚ ಮತ್ತು ರಮಿಕಾ ಶಿವು ಸಾಥ್ ನೀಡಿದ್ದಾರೆ. ಹಿರಿಯ ನಟ ರಂಗಾಯಣ ರಘು ಅವರು ನಾಯಕನ ತಂದೆಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೆನಿಲ್ಲಾ ಎಂಟರ್‌ಟೈನ್‌ಮೆಂಟ್ಸ್ ಹಾಗೂ ಜಾನಕಮ್ಮ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮಮತಾ ದೇವೇಂದ್ರ ಎಂ, ಪ್ರಶಾಂತ ಡಿ.ಎಸ್ ಮತ್ತು ರಮೇಶ ಎನ್ ಈ ಚಿತ್ರವನ್ನು ನಿರ್ಮಿಸಿದ್ದು, ರಾಜಕಾಂತ್ ಎಸ್.ಕೆ ಅವರ ಛಾಯಾಗ್ರಹಣ ಮತ್ತು ಹರ್ಷಿತ್ ಪ್ರಭು ಅವರ ಸಂಕಲನವಿರುವ ಈ ಸಿನಿಮಾ ಸದ್ಯದಲ್ಲೇ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ