ರಾಘವೇಂದ್ರ ಅಡಿಗ ಎಚ್ಚೆನ್

ನಟ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ದಂಪತಿಯ ಪುತ್ರ ಆಯುಷ್ ಉಪೇಂದ್ರ ಅವರ ಚೊಚ್ಚಲ ಸಿನಿಮಾ ನಿರ್ದೇಶಕರ ಬದಲಾವಣೆ ವಿಚಾರ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಚಿತ್ರದಿಂದ ನಿರ್ದೇಶಕರನ್ನು ಕೈಬಿಟ್ಟಿರುವುದಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ನಟಿ ಪ್ರಿಯಾಂಕಾ ಉಪೇಂದ್ರ ಕೊನೆಗೂ ಮೌನ ಮುರಿದಿದ್ದಾರೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸುದೀರ್ಘ ಪತ್ರ ಬರೆದು ತಮ್ಮ ನಿರ್ಧಾರಕ್ಕೆ ಕಾರಣಗಳನ್ನು ವಿವರಿಸಿದ್ದಾರೆ.

ಆಯುಷ್ ಅವರ ವೃತ್ತಿಜೀವನದ ಮೊದಲ ಸಿನಿಮಾವನ್ನು ರಕ್ಷಿಸುವುದು ಮತ್ತು ನಿರ್ಮಾಪಕರ ಹಣಕ್ಕೆ ಯಾವುದೇ ನಷ್ಟವಾಗದಂತೆ ನೋಡಿಕೊಳ್ಳುವುದು ತಮ್ಮ ಮುಖ್ಯ ಉದ್ದೇಶ ಎಂದು ಪ್ರಿಯಾಂಕಾ ತಿಳಿಸಿದ್ದಾರೆ. ಚಿತ್ರದ ಗುಣಮಟ್ಟ ಹಾಗೂ ನಾಯಕನ ಭವಿಷ್ಯದ ಹಿತದೃಷ್ಟಿಯಿಂದ ನಿರ್ದೇಶಕರ ಬದಲಾವಣೆಯ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಚಿತ್ರೀಕರಣ ಆರಂಭವಾದ ದಿನದಿಂದಲೂ ನಿರ್ಮಾಣ ತಂಡಕ್ಕೆ ಅಗತ್ಯವಾದ ಹಣಕಾಸು, ಸೃಜನಶೀಲ ಹಾಗೂ ಲಾಜಿಸ್ಟಿಕ್ಸ್ ಬೆಂಬಲ ನೀಡಿದ್ದಾಗಿ ಪ್ರಿಯಾಂಕಾ ಹೇಳಿದ್ದಾರೆ. ಆದರೆ ಚಿತ್ರೀಕರಣದ ವೇಳಾಪಟ್ಟಿ, ಸಮರ್ಪಕ ಸಂವಹನ ಮತ್ತು ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಸಮಸ್ಯೆಗಳು ಎದುರಾಗಿದ್ದವು ಎಂದು ಉಲ್ಲೇಖಿಸಿದ್ದಾರೆ.

ಈ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಫಿಲ್ಮ್ ಚೇಂಬರ್ ಮಧ್ಯಸ್ಥಿಕೆ ವಹಿಸುವಂತೆ ಪ್ರಿಯಾಂಕಾ ಮನವಿ ಮಾಡಿದ್ದಾರೆ. ಚಿತ್ರದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದಕ್ಕೆ ತಾವು ಬದ್ಧರಾಗಿರುವುದಾಗಿಯೂ ಭರವಸೆ ನೀಡಿದ್ದಾರೆ.

ಹೀಗಾಗಿ ಆಯುಷ್ ಅವರ ಮೊದಲ ಸಿನಿಮಾದ ನಿರ್ದೇಶಕರ ಬದಲಾವಣೆ ವಿವಾದ ಈಗ ಫಿಲ್ಮ್ ಚೇಂಬರ್ ಅಂಗಳ ತಲುಪಿದೆ. ಮಂಡಳಿ ಯಾವ ರೀತಿಯ ಮಧ್ಯಸ್ಥಿಕೆ ವಹಿಸಲಿದೆ ಮತ್ತು ಮುಂದಿನ ನಿರ್ದೇಶಕರು ಯಾರು ಎಂಬ ಕುತೂಹಲ ಚಿತ್ರರಂಗದಲ್ಲಿ ಹೆಚ್ಚಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ