Sj*

ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ. ನಿರ್ಮಿಸಿರುವ, ವಿಜಯ್ ಪಾಳೇಗಾರ್ ನಿರ್ದೇಶನದ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸಿರುವ ‘ರಾಶಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಆರಂಭದಿಂದಲೂ ತನ್ನ ವಿಭಿನ್ನ ಪ್ರಯತ್ನಗಳ ಮೂಲಕ ಕುತೂಹಲ ಮೂಡಿಸಿರುವ ಈ ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ. ಇದೀಗ ಚಿತ್ರದ ನಾಲ್ಕು ಬಿಟ್ ಸಾಂಗ್‌ಗಳನ್ನು ಒಟ್ಟಿಗೆ ‘ಫೀಲ್ ಆಫ್ ರಾಶಿ’ ಹೆಸರಿನಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ನಿರ್ದೇಶಕ ವಿಜಯ್ ಪಾಳೇಗಾರ್ ಅವರೇ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿರುವ ಈ ನಾಲ್ಕು ಬಿಟ್ ಸಾಂಗ್‌ಗಳಿಗೆ ಜನಪ್ರಿಯ ಗಾಯಕರು ಧ್ವನಿಯಾಗಿದ್ದಾರೆ. ಡಿ ಬಿಟ್ಸ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿರುವ ‘ಫೀಲ್ ಆಫ್ ರಾಶಿ’ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ವಿಭಿನ್ನ ಸಂಗೀತದ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಹಾಡುಗಳು ಸಿನಿಮಾದ ಬಗೆಗಿನ ನಿರೀಕ್ಷೆಯನ್ನೂ ಹೆಚ್ಚಿಸಿವೆ.

ಸಾಮಾನ್ಯವಾಗಿ ಚಿತ್ರದ ಹಾಡುಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುವುದು ವಾಡಿಕೆ. ಆದರೆ, ‘ರಾಶಿ’ ಚಿತ್ರತಂಡ ನಾಲ್ಕು ಬಿಟ್ ಸಾಂಗ್‌ಗಳನ್ನು ಒಂದೇ ಶೀರ್ಷಿಕೆಯಡಿ ಪ್ರೇಕ್ಷಕರ ಮುಂದಿಟ್ಟಿರುವುದು ವಿಶೇಷ. ಸಂಗೀತದ ಮೂಲಕ ಚಿತ್ರದ ಭಾವಲೋಕವನ್ನು ಪರಿಚಯಿಸುವ ಈ ಪ್ರಯತ್ನಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಚಿತ್ರತಂಡದಲ್ಲಿ ಹೊಸ ಉತ್ಸಾಹ ಮೂಡಿಸಿದೆ.

raashi1

ಈಗಾಗಲೇ ಹೊಸ ತಂಡದ ‘ಪ್ರೇಮದ ಊರಲಿ’ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಇದೇ ತಂಡದ ಮತ್ತೊಂದು ಪ್ರಯತ್ನವಾಗಿರುವ ‘ರಾಶಿ’ ಕೂಡ ಪ್ರೇಕ್ಷಕರ ಮನ ಗೆಲ್ಲಲಿದೆ ಎಂಬ ನಿರೀಕ್ಷೆ ಚಿತ್ರತಂಡಕ್ಕಿದೆ. ಕಾಮಿಡಿ, ಪ್ರೀತಿ ಹಾಗೂ ಕೌಟುಂಬಿಕ ಭಾವನೆಗಳನ್ನು ಒಳಗೊಂಡ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 13ರಂದು ಅದ್ದೂರಿಯಾಗಿ ತೆರೆಗೆ ಬರಲಿದೆ.

ನಿರ್ಮಾಪಕ ಅಖಿಲೇಶ್ ಎಂ. ಅವರೇ ಚಿತ್ರದ ಕಥೆ ಬರೆದಿದ್ದು, ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಚಿತ್ರಕಥೆ ಮತ್ತು ನಿರ್ದೇಶನವನ್ನು ವಿಜಯ್ ಪಾಳೇಗಾರ್ ನಿರ್ವಹಿಸಿದ್ದಾರೆ. ನವೀನ್ ಸೂರ್ಯ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಹಾಗೂ ಮಹೇಶ್ ಸಾತನೂರು ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

ಆದಿತ್ಯ ಶಶಿಕುಮಾರ್ ಅವರಿಗೆ ನಾಯಕಿಯಾಗಿ ಸಮೀಕ್ಷಾ ನಟಿಸಿದ್ದಾರೆ. ರಮೇಶ್ ಇಂದಿರಾ, ತಬಲಾ ನಾಣಿ, ವೀಣಾ ಸುಂದರ್, ಮಂಜು ಪಾವಗಡ, ಕರಿ ಸುಬ್ಬು, ವಿನೋದ್ ಗೊಬ್ಬರಗಾಲ, ಹುಲಿ ಕಾರ್ತಿಕ್, ವರ್ಧನ್ ತೀರ್ಥಹಳ್ಳಿ, ಉಗ್ರಂ ರವಿ ಹಾಗೂ ಭಜರಂಗಿ ಪ್ರಸನ್ನ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಒಟ್ಟಿನಲ್ಲಿ, ಸಂಗೀತದ ವಿಭಿನ್ನ ಪ್ರಯೋಗದ ಮೂಲಕ ಈಗಾಗಲೇ ಗಮನ ಸೆಳೆಯುತ್ತಿರುವ ‘ರಾಶಿ’, ಪ್ರೀತಿ, ಹಾಸ್ಯ ಹಾಗೂ ಕೌಟುಂಬಿಕ ಮನರಂಜನೆಯೊಂದಿಗೆ ನವೆಂಬರ್ 13ರಂದು ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ