ಜಾಗೀರ್ದಾರ್*

ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು 'ಸರ್ಕಾರಿ ನ್ಯಾಯಬೆಲೆ ಅಂಗಡಿ'. ಕೆಲ ದಿನಗಳ ಹಿಂದಷ್ಟೇ ಈ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ, ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ, ಚಿತ್ರದ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.

ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ ಕುಮಾರ್‌ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಮೊದಲಾದ ಕಲಾವಿದರು 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್‌ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ. ಹೆಚ್‌. ಮುನಿಯಪ್ಪ, ಶಾಸಕ ಎಲ್‌. ಶಿವರಾಮೇ ಗೌಡ, 'ಕರ್ನಾಟಕ ರಾಜ್ಯ ಸರ್ಕಾರತಿ ಪಡಿತರ ವಿತರಕರ ಒಕ್ಕೂಟ'ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಿರ್ಮಾಪಕ ಭಾ. ಮ. ಹರೀಶ್‌, ಭಾ. ಮ. ಗಿರೀಶ್‌ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ragini 1

'ಜಯಶಂಕರ ಟಾಕೀಸ್‌' ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್‌. ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಿಸುತ್ತಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾಕ್ಕೆ ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ 'ತಾಯವ್ವ' ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಸಾತ್ವಿಕ್‌ ಪವನ್‌ ಕುಮಾರ್‌ ಈ ಸಿನಿಮಾಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಅನಂತ ಆರ್ಯನ್‌ ಈ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ.

*ಇದು ಕಂಟೆಂಟ್‌ ಆಧಾರಿತ ಸಿನಿಮಾ, ಇಲ್ಲಿ ಹೇಳೋಕೆ ಹತ್ತಾರು ವಿಷಯಗಳಿವೆ...*

'ನನಗೆ ಇದೊಂದು ಹೊಸಥರದ ಪಾತ್ರ ಇಲ್ಲಿಯವರೆಗೆ ನಾನೆಂದೂ, ಈ ಥರದ ಪಾತ್ರಗಳನ್ನು ಮಾಡಿರಲಿಲ್ಲ. ಪಕ್ಕಾ ಹಳ್ಳಿಯ ಹೆಣ್ಣು ಮಗಳೊಬ್ಬಳು ತನ್ನ ಊರಿನ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ವ್ಯವಸ್ಥೆಯಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಹೇಗೆ ಎದುರಿಸಿ, ಬಡ ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸುತ್ತಾಳೆ ಎಂಬುದು ನನ್ನ ಪಾತ್ರ. ನಾನು ಈ ಸಿನಿಮಾದಲ್ಲಿ ಪಾರ್ವತಿ ಎಂಬ ಹಳ್ಳಿಯ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೊದಲ ಬಾರಿಗೆ ಕರ್ನಾಟಕದ ಅಪ್ಪಟ ಗ್ರಾಮೀಣ ಸೊಗಡಿನ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ತುಂಬ ಎಕ್ಸೈಟ್‌ ಆಗಿದ್ದೇನೆ. ಈ ಸಿನಿಮಾದ ಕಥೆ ಮತ್ತು ಪಾತ್ರ ನನಗೆ ತುಂಬ ಇಷ್ಟವಾಗಿದ್ದು, ತೆರೆಮೇಲೆ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಹೇಗೆ ಬರಬಹುದು ಎಂಬ ಕುತೂಹಲ ನನಗೂ ಇದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಇದೊಂದು ಕಂಟೆಂಟ್‌ ಆಧಾರಿತ ಸಿನಿಮಾ. ಈ ಸಿನಿಮಾದಲ್ಲಿ ಹತ್ತಾರು ವಿಷಯಗಳಿವೆ. ಆ ವಿಷಯಗಳು ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಕನೆಕ್ಟ್‌ ಆಗುವಂತಿದೆ.'

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ