ಸೂಪರ್‌ಸ್ಟಾರ್ ರಜನಿಕಾಂತ್ ತಮ್ಮ 75ನೇ ವಯಸ್ಸಿನಲ್ಲೂ ಸಿನಿಮಾಗಳಲ್ಲಿ ನಟಿಸುತ್ತಾ, ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಅವರ ಮುಂಬರುವ ‘ತಲೈವರ್ 173’ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿದೆ. ಈಗಾಗಲೇ ಈ ಚಿತ್ರದ ಅಧಿಕೃತ ಶೀರ್ಷಿಕೆ ಬಿಡುಗಡೆಯಾಗಿದ್ದು, ‘ಧರ್ಮನ್’ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಶೀರ್ಷಿಕೆಯೊಂದಿಗೆ ಮೊದಲ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಸೋಶಿಯಮ್​ ಮೀಡಿಯಾದಲ್ಲಿ ಸಕತ್​ ಸದ್ದು ಮಾಡುತ್ತಿದೆ.

ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ರಜನಿಕಾಂತ್ ನೀಲಿ ಬಣ್ಣದ ಡಾಕ್ಟರ್ ಸೂಟ್ ಧರಿಸಿ, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಕೈಯಲ್ಲಿ ರಕ್ತಸಿಕ್ತವಾದ ಶಸ್ತ್ರಚಿಕಿತ್ಸಾ ಚಾಕು ಹಿಡಿದು, ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಭಾರೀ ಬಜೆಟ್ ಸಿನಿಮಾವನ್ನು ಕಮಲ್ ಹಾಸನ್ ಅವರ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಸಂಸ್ಥೆಯು ನಿರ್ಮಿಸುತ್ತಿದ್ದು, ಕಮಲ್ ಹಾಸನ್ ಮತ್ತು ಆರ್. ಮಹೇಂದ್ರನ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶಿಸಿದ್ದರೆ, ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ ಸಿದ್ಧಪಡಿಸುತ್ತಿದ್ದಾರೆ. ಅನ್ಬರಿವ್ ಅವರು ಸಾಹಸ ನಿರ್ದೇಶನದ ಮೂಲಕ ಚಿತ್ರಕ್ಕೆ ಮತ್ತಷ್ಟು ರೋಚಕತೆ ನೀಡಲಿದ್ದಾರೆ.

ಇತ್ತೀಚೆಗೆ ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ವರದಿಯಾಗಿದ್ದು, ಈ ಚಿತ್ರವು ಈ ವರ್ಷವೇ ತೆರೆ ಕಾಣಲಿದೆ.

ಚಿತ್ರದಲ್ಲಿ ಖ್ಯಾತ ನಟಿಯರಾದ ಸಿಮ್ರಾನ್ ಮತ್ತು ರಾಶಿ ಖನ್ನಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಶೀಘ್ರದಲ್ಲೇ ಚಿತ್ರತಂಡವು ಸಂಪೂರ್ಣ ಪಾತ್ರವರ್ಗವನ್ನು ಅಧಿಕೃತವಾಗಿ ಘೋಷಿಸಲಿದೆ. ಸಂಗೀತವನ್ನು ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಸಂಯೋಜಿಸಿದ್ದರೆ, ಛಾಯಾಗ್ರಹಣವನ್ನು ನಿಕೇತ್ ಬೊಮ್ಮಿ, ಸಂಕಲನವನ್ನು ಪ್ರದೀಪ್ ಇ ರಾಗವ್ ಮತ್ತು ಸಾಹಸವನ್ನು ಅನ್ಬರಿವ್ ಅವರು ನಿರ್ವಹಿಸಲಿದ್ದಾರೆ.

ಇಂದು ಚೆನ್ನೈನಲ್ಲಿ ಚಿತ್ರದ ಪೂಜಾ ಸಮಾರಂಭವು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯೊಂದಿಗೆ ನಡೆಯುತ್ತಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ರಜನಿಕಾಂತ್ ಅವರ ‘ಧರ್ಮನ್’ ಚಿತ್ರವು ಇದೀಗ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ