- ರಾಘವೇಂದ್ರ ಅಡಿಗ ಎಚ್ಚೆನ್.

ಹಿರಿಯ ನಟ ಹಾಗೂ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿಯಲ್ಲಿ ಸಿನಿಮಾವೊಂದರ ಶೂಟಿಂಗ್ ಮುಗಿಸಿ ವಿಶ್ರಾಂತಿಗೆ ತೆರಳಿದಾಗ ಅವರಿಗೆ ಹೃದಯಾಘಾತ ಸಂಭವಿಸಿತು. ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ತಿಳಿಸಿದರು., ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ರಾಜು ತಾಳಿಕೋಟೆ ಅವರು ‘ಮನಸಾರೆ’, ‘ಪಂಚರಂಗಿ’, ‘ಮತ್ತೊಂದು ಮದುವೆನಾ’, ‘ಮೈನಾ’ ಸೇರಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ತಮ್ಮದೇ ನಾಟಕ ತಂಡವನ್ನೂ ನಡೆಸುತ್ತಿದ್ದು, ಧಾರವಾಡದ ರಂಗಾಯಣದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಬಿಗ್ ಬಾಸ್ ಕನ್ನಡ – ಸೀಸನ್ 7ರ ಸ್ಪರ್ಧಿಯಾಗಿಯೂ ಅವರು ಹೆಸರು ಗಳಿಸಿದ್ದರು.

raju

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಜನಿಸಿದ್ದು 1965ರಲ್ಲಿ. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ತಾಳಿಕೋಟೆಯ ಶ್ರೀಗುರು ಖಾಸ್ಗತೇಶ್ವರ ಮಠದಲ್ಲಿ ರಾಜು ತಾಳಿಕೋಟೆ ಅವರು ಶಾಲೆಗೆ ಸೇರಿದ್ದರು. ಬಾಲ ನಟನಾಗಿ ರಾಜು ತಾಳಿಕೋಟೆ ಅವರು ಅಭಿನಯಿಸುತ್ತಿದ್ದರು. 4ನೇ ತರಗತಿ ತನಕ ಅವರು ಅಲ್ಲಿ ಓದಿದರು. ತಂದೆ-ತಾಯಿ ತೀರಿಕೊಂಡ ನಂತರ ಶಿಕ್ಷಣ ಮೊಟಕುಗೊಳಿಸಿದರು. ಹೋಟೆಲ್ ಕ್ಲೀನರ್ ಆಗಿ ಕೆಲಸ ಮಾಡಿದರು. ಲಾರಿ ಕ್ಲೀನರ್ ಆಗಿದ್ದರು. ಬಳಿಕ ಮತ್ತೆ ರಂಗಭೂಮಿಯಲ್ಲೇ ಅವರು ತೊಡಗಿಕೊಂಡರು. ರಂಗಭೂಮಿಯ ವಿವಿಧ ವಿಭಾಗಗಳಲ್ಲಿ ಅವರು ಅನುಭವ ಪಡೆದರು. ಪಾಲಕರ ನಾಟಕ ತಂಡವನ್ನು ರಾಜು ತಾಳಿಕೋಟೆ ಮುಂದುವರಿಸಿದರು.
ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು. ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. 'ಕಲಿಯುಗದ ಕುಡುಕ', 'ಕುಡುಕರ ಸಾಮ್ರಾಜ್ಯ', ಮತ್ತು 'ಅಸಲಿ ಕುಡುಕ' ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.
ತಿಂಗಳ ಅಂತರದಲ್ಲಿ ಇಬ್ಬರು ಹಿರಿಯ ಕಲಾವಿದರ ನಿಧನ:
ಇತ್ತೀಚೆಗೆ ಕಳೆದ ತಿಂಗಳು ಸೆ.29ರಂದು ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಯಶವಂತ ಸರದೇಶಪಾಂಡೆ ನಿಧನ ಹೊಂದಿದ್ದರು. ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಯಶವಂತ ಸರದೇಶಪಾಂಡೆ (60) ಹೃದಯಾಘಾತದಿಂದ ನಿಧನರಾಗಿದ್ದರು. ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿೆತ್ತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ