ಹಿರಿಯ ರಂಗಕರ್ಮಿ, ಚಲನಚಿತ್ರ, ಕಿರುತೆರೆ ಹಾಸ್ಯ ನಟ, ಧಾರವಾಡ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ (60) ಅವರು ಸೋಮವಾರ ತೀವ್ರ ಹೃದಯಾಘಾತದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶೈನ್ ಶೆಟ್ಟಿ ನಟನೆಯ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ರಾಜು ತಾಳಿಕೋಟೆ ಉಡುಪಿಗೆ ಹೋಗಿದ್ದರು. ಹೆಬ್ರಿ ತಾಲೂಕಿನ ಸಮೀಪದಲ್ಲಿ ನಡೆಯುತ್ತಿದ್ದ ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿದ್ದಾಗ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣವೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ರಾತ್ರಿ 1.30ರ ಸುಮಾರಿಗೆ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹಿರಿಯ ತಜ್ಞ ವೈದ್ಯರ ತಂಡ ಆಂಜಿಯೋಪ್ಲಾಸ್ಟಿ ನಡೆಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಸೋಮವಾರ ಸಂಜೆ ವೇಳೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.

ಮೊದಲು ಕೂಡ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದ ಚಿಕ್ಕಸಿಂದಗಿಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

ರಾಜು ತಾಳಿಕೋಟೆ ಅವರಿಗೆ ರಂಗ ಕಲಾವಿದೆಯೂ ಆದ ಪತ್ನಿ ಪ್ರೇಮಾ ಹಾಗೂ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಲೈಫು ಇಷ್ಟೇನೇ,ರಾಜಧಾನಿ, ಅಲೆಮಾರಿ, ಮೈನಾ, ಟೋಪಿವಾಲಾ ಮತ್ತಿತರ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 7’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಜನರ ಮೆಚ್ಚುಗೆ ಪಾತ್ರರಾಗಿದ್ದರು.

ಭಾನುವಾರ ರಾತ್ರಿ 12 ಗಂಟೆಗೆ ರಾಜು ತಾಳಿಕೋಟೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ನಾನೇ ಆಸ್ಪತ್ರೆಗೆ ಕರೆದುಕೊಂಡು ಬಂದೆ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾದರು. ನಮ್ಮ ಸಿನಿಮಾದ ಶೂಟಿಂಗ್​​ನಲ್ಲಿ 2 ದಿನ ಭಾಗವಹಿಸಿದ್ದರು ಎಂದು ನಟ ಶೈನ್ ಶೆಟ್ಟಿ ಅವರು ತಿಳಿಸಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ