- ರಾಘವೇಂದ್ರ ಅಡಿಗ ಎಚ್ಚೆನ್.

ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿ ನೀಡಿ, ಸನ್ಮಾನಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, ಯಾರು ಯಾವ ಭಾಷೆಯಲ್ಲಿ ಮಾತನಾಡಿಸಿದರೂ ಕನ್ನಡದಲ್ಲೇ ಉತ್ತರ ಕೊಡುತ್ತೀವಿ ಎಂಬ ಸಂಕಲ್ಪ ಮಾಡೋಣ ಎಂದರು.

rajyothsava

ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

rajyothsava 1

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮ ಬದುಕು ಸಾರ್ಥಕವಾಗಲಿ ಎಂದು ಹಾರೈಸುತ್ತೇನೆ ಎಂದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.

rajyothsava 2

ಶಂಕರ್ ನಾಗ್ ನಾಗಮಂಡಲ ನಾಟಕ ಮಾಡಿದಾಗ ಮೇಲಿಂದ ನೋಡಿದ್ವಿ.. ಪ್ರಕಾಶ್ ರಾಜ್
2025- 26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ರಾಜ್ ಅವರು, ನನಗೆ ಬಹಳ ಭಾವನಾತ್ಮಕವಾದ ಕ್ಷಣವಿದು. 4 ದಶಕಗಳ ಹಿಂದೆ ಸೆಂಟ್ ಜೋಸೆಪ್ ಕಾಲೇಜಿನಲ್ಲಿ ಕಾಮರ್ಸ್ ಓದುತ್ತಿದ್ದೆ. ನಾನು ಬ್ಯಾಂಕ್ ಮ್ಯಾನೇಜರ್ ಆಗಬೇಕು ಎಂದು ಅನಿಸಿಲ್ಲ. ಏನು ಮಾಡಬೇಕೆಂದು ಗೊತ್ತಿರಲಿಲ್ಲ. ನಾಟಕ, ನಟನೆ ಸ್ವಲ್ಪ ಮಾಡುತ್ತಿದ್ದೆ. ಏನು ಗೊತ್ತಿಲ್ಲದೇ ನಡೆದುಕೊಂಡು ಕಲಾ ಕ್ಷೇತ್ರಕ್ಕೆ ಬಂದೆ. 4 ದಶಕಗಳ ಹಿಂದೆ ಇದೇ ಕಲಾ ಕ್ಷೇತ್ರದ ಮೆಟ್ಟಿಲುಗಳ ಮೇಲೆ ಕುಳಿತು ಏನು ಮಾಡಬೇಕು ಎಂದು ಕನಸು ಕಾಣುತ್ತಿದ್ದೇ ಎಂದು ಹೇಳಿದ್ದಾರೆ.

ಕಲಾ ಕ್ಷೇತ್ರದಲ್ಲಿ ಯಾವುದಾದರೂ ನಾಟಕ ನಡೆಯಬೇಕಿದ್ದರೇ ಬಂದು ನೋಡುತ್ತಿದ್ದೆ, ನಿದ್ದೆ ಮಾಡುತ್ತಿದ್ದೆ, ಇಲ್ಲೇ ಊಟನೂ ಮಾಡುತ್ತಿದ್ದೆ. ಶಂಕರ್ ನಾಗ್ ಅವರು ನಾಗಮಂಡಲ ನಾಟಕ ಮಾಡಿದ್ದಾಗ ನಾನು, ಬಿ ಸುರೇಶ್ ಅವರು ಮೇಲೆ ಬಾಲ್ಕನಿಯಲ್ಲಿ ಕುಳಿತು ನೋಡಿದ್ದೇವು. ಕನ್ನಡ ಸಾಹಿತ್ಯ, ಅದರ ವೈಶಿಷ್ಟ್ಯ, ಹಲವು ನಾಟಕಗಳು, ಹಲವು ಅನುಭವಗಳು, ಕನ್ನಡ ಅಂದರೆ ಏನು, ಕನ್ನಡದ ಶ್ರೀಮಂತಿಕೆ ಏನು ಎನ್ನುವುದು ಕಲಿತಿದ್ದು ಇದೇ ಕಲಾ ಕ್ಷೇತ್ರದಿಂದ ಎಂದು ಪ್ರಕಾಶ್ ರಾಜ್ ಅವರು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ