ರಾಘವೇಂದ್ರ ಅಡಿಗ ಎಚ್ಚೆನ್.

ತುಳುನಾಡಿನ ದೈವ ಕುರಿತು ಅವಮಾನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕೆಂದು ಬಾಲಿವುಡ್ ನಟ ರಣವೀರ್ ಸಿಂಗ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ
ಕಾಂತಾರಾ ಚಾಪ್ಟರ್–೧ ಚಿತ್ರದ ಪಾತ್ರದ ಬಗ್ಗೆ ನೀಡಿದ ಹೇಳಿಕೆ ತುಳುನಾಡಿನ ದೈವ ಪರಂಪರೆಯನ್ನು ಅವಮಾನಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದ್ದು, ಅದನ್ನು ರದ್ದುಪಡಿಸುವಂತೆ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು (ಮಾ.೨) ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ನಡೆಯಿತು.
ವಿಚಾರಣೆಯ ವೇಳೆ ರಣವೀರ್ ಸಿಂಗ್ ಪರ ವಕೀಲ ಸಜನ್ ಪೂವಯ್ಯ ಅವರು ದೂರವಾಣಿ ಮಾಧ್ಯಮದ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿ, ಇತ್ತೀಚೆಗೆ ಉಂಟಾಗಿರುವ ಇರಾನ್–ಇಸ್ರೇಲ್ ಯುದ್ಧ ಪರಿಸ್ಥಿತಿಯಿಂದಾಗಿ ನಟರು ಇಂಗ್ಲೆಂಡ್‌ನಲ್ಲೇ ಸಿಲುಕಿಕೊಂಡಿದ್ದು, ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ಸರ್ಕಾರದ ಪರ ವಿಶೇಷ ಸಾರ್ವಜನಿಕ ಅಭಿಯೋಜಕ ಜಗದೀಶ್ ಅವರು, ರಣವೀರ್ ಸಿಂಗ್ ಅವರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದ್ದು, ಅವರು ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ, ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನೀಡಿದ್ದ ಹಿಂದಿನ ಮಧ್ಯಂತರ ಆದೇಶವನ್ನು ಮುಂದುವರಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ ೯ರಂದು ನಡೆಸಲು ಮುಂದೂಡಿಕೆ ಮಾಡಿತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ