ಕನ್ನಡ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿದೇಶದಿಂದ ಸುಮಾರು 12 ಕೋಟಿ ರೂ. ಮೌಲ್ಯದ ಹೆಚ್ಚುವರಿ ಚಿನ್ನ ತಂದಿರುವ ಕಾರಣ ಬಂಧಿಸಲಾಗಿದೆ ಎನ್ನಲಾಗಿದ.ಎ
ದುಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾಗ ರನ್ಯಾರನ್ನು ವಶಕ್ಕೆ ಪಡೆಯಲಾಗಿದೆ. ರನ್ಯಾ ರಾವ್ ಕನ್ನಡದ ಹಲವು ಸಿನಿಮಾಗಳಲ್ಲಿ ನಡಿಸಿದ್ದಾರೆ. ಕಿಚ್ಚ ಸುದೀಪ್ ಜತೆ ಮಾಣಿಕ್ಯ ಚಿತ್ರ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೆ ತಮಿಳಿನಾ ವಾಘಾ ಚಿತ್ರದಲ್ಲೂ ನಟಿಸಿದ್ದರು.
ಮಾರ್ಚ್ 3ರಂದು ದುಬೈ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರನ್ಯಾ ಆಗಮಿಸಿದ್ದರು. ಇಲ್ಲಿನ ಕಸ್ಟಮ್ ಡಿಆರ್ಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರನ್ಯಾ ರಾವ್ ಅವರು ಡಿಜಿಪಿ ರಾಮಚಂದ್ರ ರಾವ್ ಅವರ ಸಂಬಂಧಿಯಾಗಿದ್ದಾರೆ ಎನ್ನಲಾಗಿದೆ.
ಮೂಲತಃ ಚಿಕ್ಕಮಗಳೂರಿನವರಾದ ರನ್ಯಾ ರಾವ್, 2014ರಲ್ಲಿ ಮಾಣಿಕ್ಯ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟವರು. ತದನಂತರ ಕಾಲಿವುಡ್ನತ್ತ ಮೊಗ ಮಾಡಿದ್ದರು. ತಮಿಳಿನ ವಾಘಾ ಸಿನಿಮಾ ದೊಡ್ಡ ಯಶಸ್ಸು ತಂದುಕೊಡಲಿಲ್ಲ. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜತೆ ಪಟಾಕಿ ಚಿತ್ರದಲ್ಲಿ ನಟಿಸಿದ್ದರು.