ಪರಪ್ಪನ ಅಗ್ರಹಾರದಲ್ಲಿರುವ ನಟಿ ರನ್ಯಾ ರಾವ್ಗೆ ಮತ್ತೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಈ ಬಾರಿ ಇಡಿ ಅಧಿಕಾರಿಗಳು ದೊಡ್ಡ ಆಘಾತ ನೀಡಿದ್ದಾರೆ. ಅಕ್ರಮ ಚಿನ್ನ ಸಾಗಾಟ ಪ್ರಕರಣ ಸಂಬಂಧ ನಟಿಯ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ರನ್ಯಾ ರಾವ್ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಗ್ಯಾಂಗ್ನ ಹವಾಲ ದಂಧೆ ಹಾಗೂ ಇನ್ನಿತರ ವ್ಯವಹಾರ ಈಗಾಗಲೇ ಬಯಲಾಗಿವೆ.34 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಜಪ್ತಿ
ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ಗೆ ಇ.ಡಿ ಅಧಿಕಾರಿಗಳು ಭಾರಿ ದೊಡ್ಡ ಶಾಕ್ ಕೊಟ್ಟಿದ್ದಾರೆ. ರನ್ಯಾಗೆ ಸೇರಿದ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ರನ್ಯಾರಾವ್ ಹವಾಲಾ ದಂಧೆ ನಡೆಸುತ್ತಿರುವುದು ಇಡಿ ತನಿಖೆಯಲ್ಲಿ ಧೃಢಪಟ್ಟಿದೆ. ಈ ಬೆನ್ನಲ್ಲೇ ಆಸ್ತಿಯನ್ನು ಜಪ್ತಿ ಮಾಡಿದೆ.
₹34.12 ಕೋಟಿ ಆಸ್ತಿ ಜಪ್ತಿ: ಬೆಂಗಳೂರು, ತುಮಕೂರಿನಲ್ಲಿರುವ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬೆಂಗಳೂರಿನ ಅರ್ಕಾವತಿ ಲೇಔಟ್ನಲ್ಲಿರುವ ರನ್ಯಾ ಫ್ಲಾಟ್, ತುಮಕೂರಿನ ಕೈಗಾರಿಕಾ, ಆನೇಕಲ್ನ ಕೃಷಿ ಜಮೀನು ಜಪ್ತಿಮಾಡಲಾಗಿದೆ. ಪಿಎಂಎಲ್ಎ ಕಾಯಿದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, 34.12 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ರನ್ಯಾ ರಾವ್ರನ್ನು ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿಗೆ ಹಿಂದಿರುಗುವ ಸಂದರ್ಭ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಡಿಆರ್ಐ ಅಧಿಕಾರಿಗಳು ರನ್ಯಾರಿಂದ 14.2 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಸದ್ಯ ರನ್ಯಾ ರಾವ್ಗೆ ಸಂಬಂಧಿಸಿದ 4 ಆಸ್ತಿಗಳನ್ನು ದೆಹಲಿಯ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿ ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣದ ತನಿಖೆ ಮುಂದುವರೆದಿದೆ.