ಜಾಗೀರ್ದಾರ್*
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ಪ್ರತಿಭಾನ್ವಿತ ನಟ ದೀಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ 'ದಿ ಗರ್ಲ್‌ಫ್ರೆಂಡ್'. ಗೀತಾ ಆರ್ಟ್ಸ್ ಮತ್ತು ಧೀರಜ್ ಮೊಗಿಲಿನೇನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ಗಳು ಜಂಟಿಯಾಗಿ ನಿರ್ಮಿಸುತ್ತಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ರಾಹುಲ್ ರವೀಂದ್ರನ್ ನಿರ್ದೇಶನದ ಸುಂದರ ಪ್ರೇಮಕಥೆಯ ʼದಿ ಗರ್ಲ್ ಫ್ರೆಂಡ್ʼ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ.
ʼದಿ ಗರ್ಲ್ ಫ್ರೆಂಡ್ʼ ಸ್ವರವೇ ಎಂಬ ಮೊದಲ ಹಾಡು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಅದ್ಭುತ ಮ್ಯೂಸಿಕ್ ನೀಡುವುದರ ಜೊತೆ ಧ್ವನಿಯಾಗಿದ್ದಾರೆ. ನಾಗಾರ್ಜುನ್ ಶರ್ಮಾ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ನಡುವಿನ ಆನ್ ಸ್ಕ್ರೀನ್ ಕೆಮಿಸ್ಟ್ರಿ ಹಾಡಿನ ಮೋಡಿಗೆ ಮತ್ತಷ್ಟು ಮೆರುಗು ನೀಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ 'ದಿ ಗರ್ಲ್‌ಫ್ರೆಂಡ್' ಶೀಘ್ರದಲ್ಲೇ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.
ರಾಹುಲ್ ರವೀಂದ್ರನ್ ನಿರ್ದೇಶನದ 'ದಿ ಗರ್ಲ್‌ಫ್ರೆಂಡ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ದೀಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಮಿಂಚಿದ್ದಾರೆ. ಧೀರಜ್ ಮೊಗಿಲಿನೇನಿ ಮತ್ತು ವಿದ್ಯಾ ಕೊಪ್ಪಿನೀಡಿ ಚಿತ್ರಕ್ಕೆ ಹಣ ಹೂಡಿದ್ದಾರೆ. ಟೈಟಲ್ಲೇ ಹೇಳುವಂತೆ ಇದು ಲವ್ ಸ್ಟೋರಿ ಸಿನಿಮಾ. ಪ್ಯಾನ್ ಇಂಡಿಯಾ ಮಟ್ಟದಲ್ಲಿ 'ದಿ ಗರ್ಲ್‌ಫ್ರೆಂಡ್' ಸಿನಿಮಾ ತೆರೆಗೆ ಬರಲಿದೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ಚಿತ್ರಕ್ಕಿದೆ.