SJ*

ದಿ ರೈಸ್ ಆಫ್ ಅಶೋಕ ಟ್ರೇಲರ್ ಲಾಂಚ್ ಈವೆಂಟ್​​ಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಾಥ್ ಕೊಟ್ಟರು. ರವಿಚಂದ್ರನ್​, ದುನಿಯಾ ವಿಜಯ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದಿಗಂತ್, ನಾಗಭೂಷಣ್ ಮತ್ತು ಶಿವರಾಜ್ ಕೆ ಆರ್ ಪೇಟೆ ಮೊದಲಾದವರು ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ಸತೀಶ್ ಚಿತ್ರದ ಟ್ರೇಲರ್, ಹಾಡು ಯಾವುದು ಕಾಣಿಸಲಿಲ್ಲ. ನಿನ್ನ ಕಣ್ಣಲ್ಲಿ ನೀರು ಕಾಣಿಸಿತು. ಅದು ಹೊರಗಡೆ ಬರಲಿಲ್ಲ. ನೀನು ಅಲ್ಲೇ ಅರ್ಧ ಗೆದ್ದಾಯ್ತು. ಗಂಡ್ಸು ಕಣ್ಣೀರು ಹಾಕಬಾರದು.‌ ಒಳಗೆ ಇಟ್ಟುಕೊಳ್ಳಬೇಕು. ಸಿನಿಮಾ ಮೇಲೆ ಪ್ರೀತಿ, ಆಸೆ, ಕನಸು ಇದೆ ಅನ್ನೋದು ನಿನ್ನ ಮಾತು, ನಿನ್ನ ಸ್ನೇಹಿತರು ಹೇಳ್ತಾರೆ. ನಿನ್ನ ಕನಸು, ಆಸೆ ನಿಜ ಆಗಲಿ. ಹೆಣ್ಮಕ್ಕಳಿಗೆ ಡೆಲಿವರಿ ನೋವು ಗೊತ್ತು. ಆದರೆ ಪ್ರತಿ ಸಿನಿಮಾ ಮಾಡುವಾಗ ಆಗುವುದು ಡೆಲಿವರಿ ನೋವೇ. ಆ ಆಪರೇಷನ್ ಮಾಡುವುದು ಪ್ರೇಕ್ಷಕರು. ಸಿಸರಿನ್ ಮಾಡುವುದು ನೀವೇ.‌ ಮೊದಲು ಆಪರೇಷನ್ ಮಾಡಿ.‌ ಮೊದಲು ಬದುಕಿಸಲು ಪ್ರಯತ್ನಿಸಿ. ಮೊದಲು ಸಿನಿಮಾ ನೋಡಿ. ಪ್ರೇಕ್ಷಕರ ಆಗಿ ಸಿನಿಮಾಗೆ ಹೋಗಿ. ವಿಮರ್ಶೆ ಮಾಡಲು ಹೋಗಬೇಡಿ. ಸಿನಿಮಾದವರು ಲೈಕ್ ಗೆ ಸಾಯುವುದನ್ನು ಬಿಡಿ. ಪ್ರೇಕ್ಷಕರನ್ನು ಸಿನಿಮಾ ಥಿಯೇಟರ್ ನಲ್ಲಿ ಸಿನಿಮಾ ನೋಡಲು ಬಿಡಿ. ಎರಡೂವರೆ ಗಂಟೆ ಅವರನ್ನು ಮೈಮರೆಸಲು ಬಿಡಿ. ಚೆನ್ನಾಗಿ ಆಗಲಿ ಎಂದು ಬಯಸುತ್ತೇವೆ. ಚೆನ್ನಾಗಿ ಮಾಡುವುದು ಸಿನಿಮಾದವರ ಕೆಲಸ. ಒಬ್ಬನಿಗೆ ನೂರು ರೂಪಾಯಿ ಕೊಟ್ಟು ಸಿನಿಮಾ ನೋಡಿ. ಒಂದಷ್ಟು ಸಿನಿಮಾ ಗೆಲ್ಸಿ ಎಂದು ಪ್ರೇಕ್ಷಕರಿಗೆ ಕಿವಿ ಮಾತು ಹೇಳಿದರು.

ravi

ನಟ ನೀನಾಸಂ ಸತೀಶ್ ಮಾತನಾಡಿ, ರವಿಚಂದ್ರನ್ ನಮಗೆ ತಂದೆ ಸಮಾನ. ವಿಜಿ ಸರ್ ಒಂದು ಕಾಲ್ ಗೆ ಬಂದ್ರು.‌ಯೋಗಿ ನನ್ನ ಗೆಳೆಯ. ವಸಿಷ್ಠ ಹಾರ್ಟ್ಲಿ ಮಾತನಾಡುವ ಗೆಳೆಯ. ನಾಗಭೂಷಣ್, ದಿಗ್ಗಿ, ಕೆಆರ್ ಪೇಟೆ ಎಲ್ಲರೂ ನನಗೆ ಸಪೋರ್ಟ್ ಮಾಡಲು ಬಂದಿರುವುದಕ್ಕೆ ಧನ್ಯವಾದ. ನಮ್ಮ ದಿ ರೈಸ್ ಆಫ್ ಅಶೋಕ ಸಿನಿಮಾವನ್ನು ಇದೇ ತಿಂಗಳ 27 ರಂದು ಪ್ರೇಕ್ಷಕರ ಮುಂದೆ ಇಡುತ್ತಿದ್ದೇವೆ. ನೀವು ಸಾಂಗ್ ನೋಡಿದ್ದೀರಾ? ನನ್ನ ಸ್ನೇಹಿತರು ಎಲ್ಲರೂ ಟ್ರೇಲರ್ ಲಾಂಚ್ ಗೆ ಬಂದಿದ್ದಾರೆ. ಸಪ್ತಮಿ ಕೂಡ ಒಂದು ರೀತಿ ಹೀರೋನೆ. ತೆಲುಗು, ತಮಿಳು ಮಾಡ್ತೀನಿ ಎಂದು ಹೇಳಿಕೊಂಡು ಬರ್ತಿದ್ದೆ. ಎಲ್ಲರೂ ಇವನಿಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿದೆ ಎಂದು ಮಾತನಾಡಿಕೊಂಡರು. ನನಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿಲ್ಲ. ನನ್ನ ಸಿನಿಮಾದ ಹುಚ್ಚು ಅದು.‌ ನಮ್ಮ ಸಿನಿಮಾವನ್ನು ಅವರು ನೋಡಲಿ. ಮೊದಲ ಚಿತ್ರ ತೋರಿಸಿದೆ. ಸಿನಿಮಾ ಸಖತ್ ಆಗಿ ಇದೆ ಎಂದು ತೆಲುಗು, ತಮಿಳಿನಲ್ಲಿ 200 ಥಿಯೇಟರ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಜಾಸ್ತಿ ಮಾತಾನಾಡಲ್ಲ. ಇದೇ ತಿಂಗಳ 27ಕ್ಕೆ ದಿ ರೈಸ್ ಆಫ್ ಅಶೋಕ ತೆರೆಗೆ ಬರ್ತಿದೆ. ಎರಡೂವರೆ ಕಾಲ ನನ್ನ ಕಷ್ಟ ಕಾಲದಲ್ಲಿ ನಿಂತ ಎಲ್ಲರಿಗೂ ಧನ್ಯವಾದ ಎಂದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ