- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಿಂದ ಸಣ್ಣ ಮಟ್ಟಿನ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ A2 ಆರೋಪಿಯಾಗಿರುವ ದರ್ಶನ್ ಅವರಿಗೆ 2024ರಲ್ಲಿ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಂತರ ಸರ್ವೋಚ್ಚ ನ್ಯಾಯಾಲಯ ಜಾಮೀನನ್ನು ರದ್ದು ಮಾಡಿತ್ತು. ಜಾಮೀನು ಸಿಕ್ಕ ಬಳಿಕ ದರ್ಶನ್ ಅವರ ಗನ್ ಲೈಸೆನ್ಸ್ ಅನ್ನು ಪೊಲೀಸರು ಅಮಾನತುಗೊಳಿಸಿದ್ದರು.
ಈ ಕ್ರಮ ಪ್ರಶ್ನಿಸಿ ದರ್ಶನ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. “2008ರಿಂದ ಲೈಸೆನ್ಸ್ ಹೊಂದಿದ್ದು, ಜಾಮೀನು ರದ್ದಾದ ನಂತರ ಗನ್ ಸರಂಡರ್ ಮಾಡಲಾಗಿದೆ. ಹೆಸರಿನ ಕಾರಣಕ್ಕೆ ಅಮಾನತು ಮಾಡಿದ್ದಾರೆ,” ಎಂದು ವಕೀಲ ಎಸ್. ಸುನೀಲ್ ಕುಮಾರ್ ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್, “ಹೆಸರಿನ ಕಾರಣಕ್ಕಲ್ಲ, ಆರೋಪದ ಕಾರಣಕ್ಕೆ ಕ್ರಮ,” ಎಂದು ಅಭಿಪ್ರಾಯಪಟ್ಟರೂ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಗನ್ ಲೈಸೆನ್ಸ್ ಅಮಾನತು ಕ್ರಮಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆ ನೀಡಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





