- ರಾಘವೇಂದ್ರ ಅಡಿಗ ಎಚ್ಚೆನ್. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ದರ್ಶನ್ ಇದೀಗ ಜಾಮೀನು ಕೋರಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದ ನಂತರ, ದರ್ಶನ್ ಅವರನ್ನು ಕಳೆದ ವರ್ಷ ಆಗಸ್ಟ್ 14ರಂದು ಮತ್ತೆ ಬಂಧಿಸಲಾಗಿತ್ತು. ಪ್ರಸ್ತುತ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ದರ್ಶನ್ ಪರ ವಕೀಲರು ಸಲ್ಲಿಸಿರುವ ಹೊಸ ಅರ್ಜಿಯಲ್ಲಿ, “ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿದೆ” ಎಂಬ ಕಾರಣವನ್ನು ಉಲ್ಲೇಖಿಸಿ ಜಾಮೀನು ಮರುಪರಿಶೀಲನೆಗೆ ಮನವಿ ಮಾಡಲಾಗಿದೆ. ಈ ಅರ್ಜಿ ಏಪ್ರಿಲ್ 14ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಮುಂದಿನ ವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಪ್ರಕರಣವು ಈಗಾಗಲೇ ರಾಜ್ಯ ರಾಜಕೀಯ ಹಾಗೂ ಚಿತ್ರರಂಗದಲ್ಲಿ ಭಾರೀ ಗಮನ ಸೆಳೆದಿದ್ದು, ಸುಪ್ರೀಂ ಕೋರ್ಟ್ ಮುಂದಿನ ತೀರ್ಪು ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ