- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಈ ಹಿಂದೆ ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸಿಸಿಎಚ್ ನ್ಯಾಯಾಲಯವು ದರ್ಶನ್ ವೈಯಕ್ತಿಕವಾಗಿ ಹಾಜರಾಗುವ ಅಗತ್ಯವಿಲ್ಲ ಎಂದು ಸೂಚಿಸಿತ್ತು. ಬದಲಾಗಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬಹುದು ಎಂದು ತಿಳಿಸಿತ್ತು.
ಇದೀಗ ವಿಚಾರಣೆಯ ಸಂದರ್ಭದಲ್ಲಿ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ದರ್ಶನ್ ಮನವಿ ಮಾಡಿದ್ದಾರೆ. ಆರೋಪಿಯು ವಿಚಾರಣೆಗೆ ವೈಯಕ್ತಿಕವಾಗಿ ಹಾಜರಾದರೆ ತಮ್ಮ ವಕೀಲರೊಂದಿಗೆ ನೇರವಾಗಿ ಚರ್ಚಿಸಲು ಹಾಗೂ ಅಗತ್ಯ ಕಾನೂನು ಸಲಹೆ ಪಡೆಯಲು ಅನುಕೂಲವಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
59ನೇ ಸಿಸಿಎಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿದ್ದು, ಖುದ್ದು ಹಾಜರಿಗೆ ಅವಕಾಶ ಸಿಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.





