ಜಾಗೀರ್ದಾರ್*

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ನೂತನ ಚಿತ್ರದ ನಾಯಕನಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ಚಿತ್ರವಾಗಿದ್ದು, ಅದ್ದೂರಿಯಾಗಿ ಅಪಾರವೆಚ್ಚದಲ್ಲಿ ಮೂಡಿಬರಲಿದೆ. 500 ವರ್ಷಗಳ ಹಿಂದಿನ ಕಥೆ ಇದಾಗಿದೆ. ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

rudra1

ನಮ್ಮ ಸುರಮ್ ಮೂವೀಸ್ ಲಾಂಛನದಲ್ಲಿ ಇತ್ತೀಚೆಗೆ ತೆರೆಕಂಡ “ನಿದ್ರಾದೇವಿ next door” ಚಿತ್ರಕ್ಕೆ ತಾವು ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಈಗ ನಮ್ಮ ಸಂಸ್ಥೆಯಿಂದ ಮತ್ತೊಂದು ನೂತನ ಚಿತ್ರ ಆರಂಭವಾಗಲಿದೆ. ಪಿರಿಯಾಡಿಕ್ ಜಾನರ್ ನ ಈ ಚಿತ್ರದಲ್ಲಿ ಶ್ರೀಮುರಳಿ ಅವರು ನಾಯಕರಾಗಿ ನಟಿಸುತ್ತಿದ್ದಾರೆ. ಈವರೆಗೂ ಮಾಡಿರದ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಳ್ಳಲಿದ್ದಾರೆ. ಪುನೀತ್ ರುದ್ರನಾಗ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಂಕೇತ್ ಛಾಯಾಗ್ರಹಣ, ನಿರ್ಮಲ್ ಕುಮಾರ್ ವಿ.ಎಫ್.ಎಕ್ಸ್ ಹಾಗೂ ಅಮರ್ ಅವರ ಕಲಾ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ರಾಮು ಅವರು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಈ‌ ಚಿತ್ರದಲ್ಲಿ ಹೆಸರಾಂತ ಕಲಾವಿದರು ನಟಿಸಲಿದ್ದು, ಜೊತೆಗೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ. ನಮ್ಮ ಸುರಮ್ ಮೂವೀಸ್ ನಿಂದ ಒಂದು ಉತ್ತಮ ಕಂಟೆಂಟ್ ವುಳ್ಳ ಚಿತ್ರವನ್ನು ಕನ್ನಡಿಗರಿಗೆ ನೀಡಲು‌ ಹೊರಟಿದ್ದೇವೆ ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತಾರೆ ನಿರ್ಮಾಪಕ‌ ಜಯರಾಮ್ ದೇವಸಮುದ್ರ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ