- ರಾಘವೇಂದ್ರ ಅಡಿಗ ಎಚ್ಚೆನ್.

ನಟಿ ರುಕ್ಮಿಣಿ ವಸಂತ್ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಹಾಗೂ ಚಿತ್ರಗಳನ್ನು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರುಕ್ಮಿಣಿ ವಸಂತ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಐ ತಂತ್ರಜ್ಞಾನ ಬಳಸಿ ಅವರ ಮುಖವನ್ನು ಬೇರೊಬ್ಬರ ದೇಹಕ್ಕೆ ಅಳವಡಿಸಿ ಅಶ್ಲೀಲ ಹಾಗೂ ತಪ್ಪು ಸಂದೇಶ ಸಾರುವ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪದ ಕುರಿತು ತನಿಖೆ ಆರಂಭಿಸಿದ್ದಾರೆ.

ದೂರಿನಲ್ಲಿ, ತಮ್ಮ ಗೌರವ ಮತ್ತು ವೈಯಕ್ತಿಕ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಡೀಪ್‌ಫೇಕ್ ವಿಡಿಯೋ ಹಾಗೂ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಒಟ್ಟು 29 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಇದರಲ್ಲಿ 9 ಇನ್‌ಸ್ಟಾಗ್ರಾಂ ಖಾತೆಗಳು, 14 ಎಕ್ಸ್‌ ಖಾತೆಗಳು ಹಾಗೂ 6 ಫೇಸ್‌ಬುಕ್ ಖಾತೆಗಳು ಸೇರಿವೆ. ಸದ್ಯ ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಡೀಪ್‌ಫೇಕ್ ತಂತ್ರಜ್ಞಾನ ದುರ್ಬಳಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ವಿಶೇಷ ಮಹತ್ವ ಸಿಕ್ಕಿದ್ದು, ಸೈಬರ್ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ