ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ರುಕ್ಮಿಣಿ ವಸಂತ್ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಸೂಪರ್‌ಸ್ಟಾರ್ ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಅವಕಾಶವನ್ನು ಪಡೆದಿದ್ದಾರೆ. ಇದರ ಜೊತೆಗೆ, ಪ್ರಶಾಂತ್ ನೀಲ್ ನಿರ್ದೇಶನದ ಜೂನಿಯರ್ ಎನ್‌ಟಿಆರ್ ಅವರ ಚಿತ್ರದಲ್ಲೂ ಅವರು ನಾಯಕಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕನ್ನಡದ ನಟಿಯೊಬ್ಬರು ತೆಲುಗು ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲೇರುವುದು ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯ.‘ಸ್ಪಿರಿಟ್’ ಚಿತ್ರವನ್ನು ಸಂದೀಪ್ ರೆಡ್ಡಿ ವಂಗ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರಕ್ಕೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇದೆ. ಈ ಹಿಂದೆ ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿಯಾಗಿ ಆಯ್ಕೆಯಾಗಿದ್ದರು. ಆದರೆ, ಕೆಲವು ಕಾರಣಗಳಿಂದ ಅವರು ಚಿತ್ರದಿಂದ ಹೊರಬಂದಿದ್ದಾರೆ. ಇದೀಗ ನಿರ್ದೇಶಕರು ರುಕ್ಮಿಣಿ ವಸಂತ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರುಕ್ಮಿಣಿ ವಸಂತ್ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಅಮೋಘ್ನವಾಗಿ ನಟಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಚಿತ್ರ ತೆಲುಗಿನಲ್ಲಿ ‘ಅಪ್ಪುಡೋ ಇಪ್ಪುಡೋ ಎಪ್ಪುಡೋ’ ಎಂಬ ಹೆಸರಿನಲ್ಲಿ ತೆರೆಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆಯಿತು.
ಈ ಚಿತ್ರದ ಮೂಲಕ ರುಕ್ಮಿಣಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಪ್ರಭಾಸ್ ಜೊತೆಯ ಚಿತ್ರದ ಆಫರ್ ದೊರೆತಿರುವುದು ಕನ್ನಡಿಗರಿಗೂ ಸಂತಸ ತಂದಿದೆ. ಇದರ ಜೊತೆಗೆ, ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಒಟ್ಟಿಗೆ ಕೆಲಸ ಮಾಡುತ್ತಿರುವ ‘ಎನ್‌ಟಿಆರ್ 31’ ಚಿತ್ರದಲ್ಲೂ ರುಕ್ಮಿಣಿ ನಾಯಕಿಯಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರುಕ್ಮಿಣಿ ಈಗಾಗಲೇ ಕನ್ನಡದಲ್ಲಿ ಶಿವರಾಜ್‌ಕುಮಾರ್, ರಕ್ಷಿತ್ ಶೆಟ್ಟಿ, ಗಣೇಶ್ ಮುಂತಾದ ದಿಗ್ಗಜರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕನ್ನಡದಿಂದ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.