ಕನ್ನಡ ಚಿತ್ರರಂಗದ ಜನಪ್ರಿಯ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು AI ತಂತ್ರಜ್ಞಾನ ಬಳಸಿ ಸೃಷ್ಟಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ ಎಂದು ಆರೋಪಿಸಿ ನಟಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಟಿ ರುಕ್ಮಿಣಿ ವಸಂತ್ ಅವರು ಸ್ವಿಮ್ ಸೂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ಫೋಟೋಗಳು ವೈರಲ್ ಆದ ಬೆನ್ನಲ್ಲೇ, ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಅವರ ಮುಖವನ್ನು ಬೇರೆಯವರ ದೇಹಕ್ಕೆ ಅಳವಡಿಸಿ ಅಶ್ಲೀಲ ಕಂಟೆಂಟ್ ರಚಿಸಲಾಗಿದೆ ಎಂದು ಆರೋಪಿಸಲಾಗಿದೆ.
ನಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಾಕಿ, “ಇಂತಹ ಅಶ್ಲೀಲ ಫೋಟೋಗಳನ್ನು ಸೃಷ್ಟಿ ಮಾಡುವುದು ಮತ್ತು ಶೇರ್ ಮಾಡುವುದನ್ನು ನಿಲ್ಲಿಸಿ” ಎಂದು ಎಚ್ಚರಿಕೆ ನೀಡಿದ್ದರು. ಆದರೂ ಈ ರೀತಿಯ ಚಟುವಟಿಕೆಗಳು ಮುಂದುವರಿದ ಕಾರಣ, ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಕ್ರಮ: ಸೈಬರ್ ಕ್ರೈಮ್ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅಶ್ಲೀಲ ಕಂಟೆಂಟ್ ಸೃಷ್ಟಿ ಮತ್ತು ಶೇರ್ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.





