ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ ||
ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ ಸಿನಿಮಾ ತಿರುವಣ್ಣಾಮಲೈನಲ್ಲಿನ ಚಿತ್ರೀ

ಬಿ. ವಿಜಯ್ ಕುಮಾರ್ ಎಂಬ ಸುಸಂಪನ್ನ, ವಿದ್ಯಾವಂತ ಸುರದ್ರೂಪಿ ತರುಣ ಸಂಚಾರಿ ವಿಜಯ್ ಆಗಿದ್ದರ ಹಿಂದೆಯೂ ಒಂದು ರೋಚಕ ಕಥೆ ಇದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಬಿಇ ಮುಗಿಸಿ ಕೆಲಸವನ್ನು ಅರಸಿ ಬೆಂಗಳೂರಿಗೆ ಬಂದು ಕೆಲ ಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಲೇ ನಟನಾಗ ಬೇಕೆಂಬ ಅಸೆಯಿಂದ ಸಂಜೆಯ ಹೊತ್ತಿನಲ್ಲಿ ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ರಂಗಭೂಮಿಯ ನಟನೆಯಲ್ಲಿ ನಿರತರಾಗುತ್ತಿದ್ದಂತೆಯೇ ಎರಡು ದೋಣಿಯ ಮೇಲೆ ಕಾಲು ಇಡುವುದು ಸರಿಯಲ್ಲ ಎಂದು ನಿರ್ಧರಿಸಿ,ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸಲುವಾಗಿ ಇದ್ದ ಕೆಲಸಕ್ಕೆ ರಾಜೀನಾಮೆ ಕೊಟ್ಟು ಸಂಪೂರ್ಣವಾಗಿ ರಂಗಭೂಮಿಯಲ್ಲಿ ತೊಡಗಿಕೊಳ್ಳುತ್ತಾರೆ. ಆಗಾಗಲೇ ಖ್ಯಾತಿ ಪಡೆದಿದ್ದ ಸಂಚಾರಿ ಎಂಬ ಹೆಸರಿನ ನಾಟಕ ತಂಡದ ಅವಿಭಾಜ್ಯ ಅಂಗವಾಗಿ ಸುಮಾರು ಹತ್ತು ವರ್ಷಕ್ಕೂ ಅಧಿಕವಾಗಿ ಕಾಲ ಕಳೆದದ್ದರಿಂದ ಅವರು ಸಂಚಾರಿ ವಿಜಯ್ ಎಂದೇ ಖ್ಯಾತಿಯನ್ನು ಪಡೆಯುತ್ತಾರೆ. ಸಂಚಾರಿ ನಾಟಕ ತಂಡವಲ್ಲದೇ ನಾಡಿನ ಹಲವಾರು ತಂಡಗಳೊಂದಿಗೆ ಲೆಕ್ಕವಿಲ್ಲದಷ್ಟು ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೇ, ಅದರ ಜೊತೆ ಜೊತೆಯಲ್ಲಿಯೇ ಕನ್ನಡದ ವಿವಿಧ ಛಾನೆಲ್ಲುಗಳ ಧಾರಾವಾಹಿಗಳಲ್ಲದೇ ಅಲ್ಲೊಂದು ಇಲ್ಲೊಂದು ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಲ್ಲದೇ, ಒಂದೆರಡು ನಾಟಕಗಳನ್ನು ಸಹ ನಿರ್ದೇಶಿಸಿದ್ದರು.





