- ರಾಘವೇಂದ್ರ ಅಡಿಗ ಎಚ್ಚೆನ್.

 “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಬುಧವಾರ ಮನವಿ ಸಲ್ಲಿಸಲಾಯಿತು.

ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ತಿಳಿಸಿದರು. ಹೊಸ ಚಲನಚಿತ್ರ ನೀತಿ ತರಲು ಚರ್ಚೆ, ಸಹಾಯಧನ ಹೆಚ್ಚಳ, ಪ್ರಾಚ್ಯಾಗಾರ ಪ್ರಾರಂಭಿಸಲು ಈ ವರ್ಷದ ಚಲನಚಿತ್ರ ಪ್ರಶಸ್ತಿ ಪ್ರಕ್ರಿಯೆ ಪ್ರಾರಂಭಿಸಿಲು ಸೂಕ್ತ ಕ್ರಮ, ಚಿತ್ರನಗರಿ ನಿರ್ಮಾಣಕ್ಕೆ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಯ ಬಗ್ಗೆ ಹಣಕಾಸು ಇಲಾಖೆಯ ಎಸಿಎಸ್ ಅವರನ್ನು ಉಲ್ಲೇಖಿಸಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ

ಬಿಡಿಎಯಿಂದ ಐದು ಎಕರೆ ಭೂಮಿ ನೀಡುವ ಕುರಿತಾಗಿ, ‘ಯಾವ ರೀತಿಯಲ್ಲಿ ಸರ್ಕಾರ ಸಹಾಯ ಮಾಡಬಹುದು’ ಎನ್ನುವ ಬಗ್ಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ‌.

sandalwood 1

2011 ರಲ್ಲಿ ರೂಪಿಸಿದ್ದ ಚಲನಚಿತ್ರ ನೀತಿಯನ್ನು ಇಂದಿಗೂ ಅನುಸರಿಸಲಾಗುತ್ತಿದೆ. ಕಳೆದ 15 ವರ್ಷದಲ್ಲಿ ತಂತ್ರಜ್ಞಾನ ವಿಚಾರವಾಗಿ ಸಾಕಷ್ಟು ಬದಲಾವಣೆ ಕಂಡಿದೆ. ಆದ ಕಾರಣ ಹೊಸ ನೀತಿಯಲ್ಲಿ ಓಟಿಟಿ ಮತ್ತು ಡಿಜಿಟಲ್ ವಿತರಣಾ ವ್ಯವಸ್ಥೆ, ಎಐ ಮತ್ತು ಹೊಸ ತಂತ್ರಜ್ಞಾನ ಬಳಕೆ, ಕನ್ನಡ ಚಿತ್ರರಂಗ ರಕ್ಷಣೆ, ಸಣ್ಣ ಚಿತ್ರಗಳಿಗೆ ಪ್ರೋತ್ಸಾಹ, ಚಿತ್ರಮಂದಿರಗಳ ಉಳಿವು, ಕಲಾವಿದರು ಮತ್ತು ಕಾರ್ಮಿಕರ ಕಲ್ಯಾಣ, ಚಲನಚಿತ್ರ ಶಿಕ್ಷಣ ಮತ್ತು ಆಕ್ರೈವ್, ಜಾಗತಿಕ ಮಾರುಕಟ್ಟೆ ವಿಸ್ತರಣೆ ಬಗ್ಗೆ ಬದಲಾವಣೆ ತರಬೇಕು.

ಪ್ರತಿವರ್ಷ 250 ಕ್ಕೂ ಹೆಚ್ಚು ಕನ್ನಡ ಚಿತ್ರಗಳು ಬಿಡುಗಡೆಯಾಗುತ್ತೆ. ಅನೇಕ ಓಟಿಟಿ ವೇದಿಕೆಗಳು ಬಹುರಾಷ್ಟ್ರೀಯ ಕಂಪೆನಿಗಳಾಗಿರುವ ಕಾರಣಕ್ಕೆ ಸಣ್ಣ ಮೊತ್ತದ ಸಿನಿಮಾಗಳು ಎಂದು ಖರೀದಿ ಮಾಡುತ್ತಿಲ್ಲ ಆದ ಕಾರಣಕ್ಕೆ ಸರ್ಕಾರದಿಂದಲೇ ಸರ್ಕಾರಿ ಓಟಿಟಿ ವೇದಿಕೆ ಪ್ರಾರಂಭಿಸಿ ಕನ್ನಡ ಚಿತ್ರರಂಗದ ಉಳಿವಿಗೆ ಸಹಕಾರಿಯಾಗಬಹುದು.‌

ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ಮೂಲಕ ಚಿತ್ರಮಂದಿರಗಳ ಲೈಸೆನ್ಸ್ ನವೀಕರಣಕ್ಕೆ ಏಕಗವಾಕ್ಷಿ ಯೋಜನೆ ತರಬೇಕು. ಅನೇಕ ನಿಯಮಗಳು ಸೆಲ್ಯುಲಾಯ್ಡ್ ಕಾಲಕ್ಕೆ ಹೊಂದಿಕೆಯಾಗುವಂತಿದ್ದು ಡಿಜಿಟಲ್ ಯುಗಕ್ಕೆ ಅನ್ವಯವಾಗುವಂತೆ ಷರತ್ತುಗಳನ್ನು ರೂಪಿಸಬೇಕು. ಈ ಮೊದಲು 1200 ಚಿತ್ರಮಂದಿರಗಳು ರಾಜ್ಯದಲ್ಲಿದ್ದವು‌. ಈಗ ಅವುಗಳ ಸಂಖ್ಯೆ 400 ಕ್ಕೆ ಕುಸಿದಿದೆ.‌ ಆದ ಕಾರಣ ಹೊಸ ಬಡಾವಣೆ, ಗ್ರಾಮೀಣ ಪ್ರದೇಶದಲ್ಲಿ ಹೊಸ ಚಿತ್ರಮಂದಿರಗಳನ್ನು ನಿರ್ಮಿಸುವುದಕ್ಕೆ ವಿಶೇಷ ಪ್ರೋತ್ಸಾಹ, ತೆರಿಗೆ, ಮೂಲಸೌಕರ್ಯ ವ್ಯವಸ್ಥೆ ಮಾಡುವುದು.

ಹಳೆಯ ಏಕ ಪರದೆ ಚಿತ್ರಮಂದಿರಗಳ ನವೀಕರಣ,‌ ಆಧುನೀಕರಣಕ್ಕೆ ನೆರವಿನ ಜೊತೆಗೆ ಶೇ.4 ರಷ್ಟು ಬಡ್ಡಿ ದರದಲ್ಲಿ ಸಾಲ ದೊರೆಯುವ ವ್ಯವಸ್ಥೆ ಮಾಡಬೇಕು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ