ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ಬಹು ನಿರೀಕ್ಷಿತ ‘ಪಿನಾಕ’ ಚಿತ್ರ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಪಿನಾಕ” ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದೆ.

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಗಣೇಶ್ ಅವರು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಅಭಿಮಾನಿಗಳ ಮನ ಗೆಲ್ಲುತ್ತಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇದೊಂದು ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದೆ.

ಭರ್ಜರಿ ಸೆಟ್ ಗಳು “ಪಿನಾಕ” ಚಿತ್ರದ ವಿಶೇಷಗಳಲ್ಲಿ ಒಂದಾಗಿದೆ. ಫಸ್ಟ್ ಲುಕ್ ಪೋಸ್ಟರ್, ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಪೋಸ್ಟರ್ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಯಾವುದೇ ಕೊರತೆ ಬಾರದ ಹಾಗೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಗಣೇಶ್ ಅವರು ನೀಡಿರುವ ಸಹಕಾರಕ್ಕೆ ಚಿತ್ರತಂಡ ಧನ್ಯವಾದ ತಿಳಿಸಿದೆ. ನುರಿತ ತಂತ್ರಜ್ಞರ ಕಾರ್ಯವೈಖರಿ ಹಾಗೂ ಅನುಭವಿ ಕಲಾವಿದರ ತಾರಾಬಳಗ “ಪಿನಾಕ” ಚಿತ್ರಕ್ಕಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ