– ರಾಘವೇಂದ್ರ ಅಡಿಗ ಎಚ್ಚೆನ್.

ಸಪ್ತಮಿ ಅಂಥಹಾ ನಟಿಯನ್ನು ನಾನು ನೋಡಿಲ್ಲ. ಬಹಳ ಶ್ರಮ ಹಾಕಿ ಕೆಲಸ ಮಾಡುತ್ತಾರೆ, ಬಹಳ ಸರಳವಾಗಿ ಇರುತ್ತಾರೆ ಎಂದು ನಟಿ ಸತೀಶ್ ನೀನಾಸಂ ಉದಾಹರಣೆ ಸಹಿತ ವಿವರಿಸಿದರು. ಅಲ್ಲದೆ ನನಗಿಂತ ಸಪ್ತಮಿ ಪಾತ್ರಕ್ಕೆ ಒಳ್ಳೆಯ ಡೈಲಾಗ್ ಸಿಕ್ಕಿದೆ’ ಎಂದು ಹೇಳಿದರು.ನೀನಾಸಂ ಸತೀಶ್ ಹಾಗೂ ಸಪ್ತಮಿ ಗೌಡ  ಅವರು ‘ದಿ ರೈಸ್ ಆಫ್ ಅಶೋಕ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ವೇಳೆ ಅವರು ಮಾತನಾಡಿದರು.
ಸಪ್ತಮಿ ಅವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ. ‘ಈ ಪಾತ್ರ ಚೆನ್ನಾಗಿ ಕನೆಕ್ಟ್ ಆಗುತ್ತೆ. ತುಂಬಾನೇ ಪ್ರಬುದ್ಧವಾಗಿ ನಡೆದುಕೊಳ್ಳುವ ಪಾತ್ರ ಇದು. ಎಲ್ಲಾ ಮಹಿಳೆಯರ ಪರವಾಗಿ ನಾನು ಪ್ರಶ್ನೆ ಕೇಳುತ್ತೇನೆ. ಈಗ ಮಹಿಳೆಯರು ಪ್ರಶ್ನೆ ಮಾಡುವ ಪರಿಸ್ಥಿತಿಯಲ್ಲಿದ್ದೇವೆ. ಅಷ್ಟು ಮೀಡಿಯಂಗಳು ನಮಗೆ ಇವೆ. ಸಿನಿಮಾ ನೋಡಿದ ಬಳಿಕ ಪಾತ್ರ ಹಾಗೆಯೇ ಉಳಿದುಕೊಳ್ಳುತ್ತದೆ’ ಎಂದು ಹೇಳಿದರು.

1000572022

ದಿ ರೈಸ್ ಆಫ್ ಅಶೋಕ 70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ.
ಚಿತ್ರದಲ್ಲಿ ಸತೀಶ್​ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ ತಾರಾಬಳಗದಲ್ಲಿದ್ದಾರೆ.

1000572024

ನಿರ್ದೇಶಕ ವಿನೋದ್ ದೊಂಡಾಲೆ ನಿಧನದ ನಂತರ ‘ಅಶೋಕ ಬ್ಲೇಡ್’ ಸಿನಿಮಾವನ್ನು ಸತೀಶ್ ನೀನಾಸಂ ‘ದಿ ರೈಸ್ ಆಫ್ ಅಶೋಕ’ ಹೆಸರಿನಲ್ಲಿ ಪ್ರಾಜೆಕ್ಟ್​ ಅನ್ನು ಮತ್ತೆ ಕೈಗೆತ್ತಿಕೊಂಡು ಕೆಲಸ ಪ್ರಾರಂಭಿಸಿದರು. ಈಗ ಆ ಕೆಲಸ ಮುಕ್ತಾಯಗೊಂಡಿದ್ದು, ಚಿತ್ರ ಬಿಡುಗಡೆ ಹಂತ ತಲುಪಿದೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್​ ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ