- ರಾಘವೇಂದ್ರ ಅಡಿಗ ಎಚ್ಚೆನ್.

'ಸರ್ಕಾರಿ ನ್ಯಾಯಬೆಲೆ ಅಂಗಡಿ' ಹೀಗೊಂದು ಹೆಸರಿನಲ್ಲಿ ಕನ್ನಡದಲ್ಲಿ ಸಿನಿಮಾವೊಂದು ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. ಇದೀಗ ಈ ಸಿನಿಮಾ ಸದ್ದಿಲ್ಲದೆ ತನ್ನ ಚಿತ್ರೀಕರಣವನ್ನು ಪೂರೈಸಿದೆ. ಸಿನಿಮಾದ ಹೆಸರೇ ಹೇಳುವಂತೆ, ಇದು 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥಾಹಂದರದ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ. ಇನ್ನು ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ ಬಂಗಾರಪ್ಪ, ದೊಡ್ಡಣ್ಣ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾದಲ್ಲಿ ಮಂಡ್ಯ ಜಿಲ್ಲೆಯ ಮಾಜಿ ಸಂಸದ, ಹಿರಿಯ ರಾಜಕಾರಣಿ ಎಲ್‌. ಆರ್.‌ ಶಿವರಾಮೇಗೌಡ ಕೂಡ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

IMG-20251009-WA0012

ಇಡೀ ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಮತ್ತು ಪಡಿತರ ವ್ಯವಸ್ಥೆಯ ಮೇಲೆ ಮೂಡಿ ಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದಾಗಿದ್ದು, ಕನ್ನಡದ ಜೊತೆಗೆ ದೇಶದ ಇತರ ಭಾಷೆಗಳಲ್ಲೂ ಈ ಸಿನಿಮಾವನ್ನು ತಲುಪಿಸುವ ಯೋಚನೆಯಲ್ಲಿದೆ ಚಿತ್ರತಂಡ. ಇಂಥದ್ದೇ ಹಲವು  ವಿಷಯಗಳನ್ನು, ವಿಶೇಷತೆಗಳನ್ನು ಹೊತ್ತು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಕ್ಯಾರೆಕ್ಟರ್‌ ಟೀಸರ್‌ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಒಂದಷ್ಟು  ಮಾತನಾಡಿತು.

IMG-20251009-WA0015

ಇನ್ನು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ವರ್ಣರಂಜಿತ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ, ಮಂಡ್ಯ ಜಿಲ್ಲೆಯ ಮಾಜಿ ಸಂಸದ ಎಲ್‌. ಆರ್‌. ಶಿವರಾಮೇಗೌಡ 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಮೂಲಕ ಮೊದಲ ಬಾರಿಗೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ಎಲ್‌. ಆರ್‌. ಶಿವರಾಮೇಗೌಡ ಅವರದ್ದು ಮುಖ್ಯಮಂತ್ರಿಯ ಪಾತ್ರವಂತೆ. ಮೊದಲ ಬಾರಿಗೆ 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ಇಂಥದ್ದೊಂದು ಪಾತ್ರವನ್ನು ನಿರ್ವಹಿಸಿದ ಬಗ್ಗೆ ಖುಷಿಯಿಂದ ಮಾತನಾಡಿದ ಎಲ್‌. ಆರ್‌. ಶಿವರಾಮೇಗೌಡ, 'ನಾನು ಸುಮಾರು ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದು, ರಾಜಕಾರಣಿಯಾಗಿ ಕೆಲಸ ಮಾಡಿದ್ದೇನೆ. ಜನಪ್ರತಿನಿಧಿಯಾಗಿ ಆಯ್ಕೆಯಾಗಿ ಬಂದರೂ, ಮಂತ್ರಿಯಾಗುವ ಅದೃಷ್ಟ ನನಗೆ ಸಿಗಲಿಲ್ಲ ಎಂಬ ಬೇಸರವಿದೆ. ಆದರೆ ಈ ಸಿನಿಮಾದಲ್ಲಿ ಬರೀ ಮಂತ್ರಿಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿಯೇ ಕಾಣಿಸಿಕೊಂಡಿದ್ದೇನೆ. ರಿಯಲ್‌ ಲೈಫ್‌ನಲ್ಲಿ ಇನ್ನೂ ಮುಖ್ಯಮಂತ್ರಿಯಾಗುವ ಅದೃಷ್ಟ ಬರದಿದ್ದರೂ, ರೀಲ್‌ನಲ್ಲಿ ಈ ಸಿನಿಮಾದ ಮೂಲಕ ಮುಖ್ಯಮಂತ್ರಿಯಾಗಿದ್ದೇನೆ. ಸಿನಿಮಾದ ನಿರ್ದೇಶಕರು, ನಿರ್ಮಾಪಕರು ಹೇಳಿದಂತೆ 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ಮುಖ್ಯಮಂತ್ರಿಯಾಗಿ ನನ್ನ ಪಾತ್ರವನ್ನು ನಿಭಾಯಿಸಿದ್ದೇನೆ. ಸಿನಿಮಾರಂಗದ ಜೊತೆಗೆ ಮೊದಲಿನಿಂದಲೂ ನಂಟಿದ್ದರೂ, ಯಾವತ್ತೂ ತೆರೆಮೇಲೆ ಅಭಿನಯಿಸಿರಲಿಲ್ಲ. ಅಭಿನಯ ನನಗೊಂದು ಹೊಸ ಅನುಭವ ಕೊಟ್ಟಿದೆ. 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನನ್ನ ಪಾತ್ರ ತುಂಬ ಚೆನ್ನಾಗಿ ಮೂಡಿಬಂದಿದೆ ಎಂಬ ವಿಶ್ವಾಸವಿದೆ. 'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರ ಇಂದಿನ ಪಡಿತರ ವ್ಯವಸ್ಥೆ ಪರಿಸ್ಥಿಯನ್ನು ಬಿಂಬಿಸುವ ಸಿನಿಮಾವಾಗಿದ್ದು, ಎಲ್ಲರಿಗೂ ಇಷ್ಟವಾಗುತ್ತದೆʼ ಎಂಬ ಭರವಸೆ ವ್ಯಕ್ತಪಡಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ