ರಾಘವೇಂದ್ರ ಅಡಿಗ ಎಚ್ಚೆನ್.

ಸಾಮಾಜಿಕ ಕಳಕಳಿಯ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ ಸಿನಿಮಾ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಈ ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. ಈಗ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಕುಮಾರ್ ಬಂಗಾರಪ್ಪ ಆವರ ಪಾತ್ರದ ಟೀಸರ್ ಬಿಡುಗಡೆ ಆಗಿದೆ. ಯಲಹಂಕ ಕ್ಷೇತ್ರದ ಶಾಸಕರಾದ ಎಸ್. ಅರ್. ವಿಶ್ವನಾಥ್  ಅವರು ’ ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಕುಮಾರ್ ಬಂಗಾರಪ್ಪ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇತ್ತೀಚೆಗೆ ಬೆಂಗಳುರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಜೊತೆಗೆ ಬಿಎಂಟಿಸಿ ಸಂಸ್ಥೆಯ ಅಧ್ಯಕ್ಷರು ವಿ.ಎಸ್. ಆರಾಧ್ಯ ಸೇರಿದಂತೆ ಹಲವು ಗಣ್ಯರು, ಚಿತ್ರತಂಡದ ಸದಸ್ಯರು ಭಾಗವಹಿಸಿ ಚಿತ್ರದ ಕುರಿತಂತೆ ಮಾದ್ಯಮದೊಂದಿಗೆ ಮಾಹಿತಿ ಹಂಚಿಕೊಂಡರು.

sarkari

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯ ನೂತನ ಅದ್ಯಕ್ಷರಾಗಿ ಆಯ್ಕೆಯಾಗಿರುವ ಕುಮಾರ್ ಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು.
ಸಿನಿಮಾದ ಹೆಸರೇ ಹೇಳುವಂತೆ, ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರವಿರುವ ಚಿತ್ರ. ಪಕ್ಕಾ ಗ್ರಾಮೀಣ ಸೊಗಡಿನ ಕಥೆಯನ್ನು ಹೊಂದಿರುವ ಈ ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲೇ ನಡೆಸಿರುವುದು ವಿಶೇಷ.
ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಗ್ಲಾಮರಸ್ ಪಾತ್ರಗಳಲ್ಲಿ ಮಿಂಚಿ, ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಇದೇ ಮೊದಲ ಬಾರಿಗೆ ಹಳ್ಳಿಯ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಕಂ ರಾಜಕಾರಣಿ ಕುಮಾರ ಬಂಗಾರಪ್ಪ, ದೊಡ್ಡಣ್ಣ ಮೊದಲಾದವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

sarkari 2

ಈ ಹಿಂದೆ ‘ತಾಯವ್ವ’ ಚಿತ್ರವನ್ನು ನಿರ್ದೇಶಿಸಿದ್ದ ಸಾತ್ವಿಕ ಪವನ ಕುಮಾರ್, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಜಯಶಂಕರ ಟಾಕೀಸ್ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ