- ರಾಘವೇಂದ್ರ ಅಡಿಗ ಎಚ್ಚೆನ್.

ಒಂದು ವಿಭಿನ್ನ ಪ್ರೇಮ ಕಥನವೆಂಬ ಸುಳಿವಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ಚಿತ್ರ ಲವ್ ಸೀಸನ್ಸ್. ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಮೊದಲ ಲಿರಿಕಲ್ ವೀಡಿಯೋ ಸಾಂಗ್ ಇದೀಗ ಬಿಡುಗಡೆಗೊಂಡಿದೆ. ಈ ಮೂಲಕ ಮಧುರವಾದ ಸಾಹಿತ್ಯ, ಸಂಗೀತದ ಗೀತೆಯ ಮೂಲಕ ಲವ್ ಸೀಸನ್ಸ್ ಮ್ಯೂಸಿಕ್ ಹಂಗಾಮಕ್ಕೆ ಚಾಲನೆ ಸಿಕ್ಕಂತಾಗಿದೆ.
ಎನ್‌.ಆರ್‌ ಸ್ಟುಡಿಯೋ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಳೆಯಾಗೋ ಮೊದಲೇ ಕೊಡೆ ಹಿಡಿದು ಬರುವೆ, ನಗು ಮುಗಿವಾ ಮೊದಲೇ ಹೊಸ ಖುಷಿಯ ಕೊಡುವೆ ಎಂಬ ಮೋಹಕ ಸಾಲುಗಳನ್ನು ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಬರೆದಿದ್ದಾರೆ.

seasons

ವೀರ್ ಸಮರ್ಥ್ ಸಂಗೀತ ಸಂಯೋಜಿಸಿರುವ ಗೀತೆಗೆ ಸರೆಗಮಪ ಸೀಸನ್ ೧೦ ಸ್ಪರ್ಧಿಯಾಗಿ ಪ್ರಸಿದ್ಧಿ ಪಡೆದಿದ್ದ ಪ್ರಜ್ಞಾ ಮರಾಠೆ ಮತ್ತು ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಈ ಹಿಂದೆ ಟೀಸರ್ ಬಿಡುಗಡೆಯ ಸಂದರ್ಭದಲ್ಲಿಯೇ ವೀರ್ ಸಮರ್ಥ್ ಈ ಸಿನಿಮಾದ ಹಾಡುಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು. ಇದೀಗ ಬಿಡುಗಡೆಗೊಂಡಿರೋ ಹಾಡು ಆ ಮಾತುಗಳನ್ನು ನಿಜವಾಗಿಸಿದಂತಿದೆ.

seasons 3

ಎನ್.ಆರ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಎನ್.ಆರ್ ಮಂಜುನಾಥ (ನೀಲೇರಿ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ ಸಂಗೀತ ನಿದೇಶನ ಈ ಚಿತ್ರಕ್ಕಿದೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ.

seasons 2

ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ