ರಾಘವೇಂದ್ರ ಅಡಿಗ ಎಚ್ಚೆನ್.

2021ರ ಆಗಸ್ಟ್ 15ರಂದು ಬಿಡುಗಡೆಯಾಗಿದ್ದ ವಿಜಯ್ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿಣೋಯ್ ಕೇಸ್ ನಂಬರ್ 18’ ಚಿತ್ರ ಇದೀಗ ಐದು ವರ್ಷಗಳ ಬಳಿಕ ಸೀಕ್ವೆಲ್ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.
ಈ ಸೀಕ್ವೆಲ್‌ಗೆ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಎಂದು ಹೆಸರಿಡಲಾಗಿದ್ದು, ಫೆಬ್ರವರಿ 20ರಂದು ಸಿನಿಮಾ ಬಿಡುಗಡೆಯಾಗಲಿದೆ. ಮೊದಲ ಭಾಗದಂತೆ ಈ ಚಿತ್ರವೂ ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿದೆ.

seconds 2

ಇತ್ತೀಚೆಗೆ ಬಿಡುಗಡೆಯಾದ ಚಿತ್ರದ ಟ್ರೇಲರ್‌ನಲ್ಲಿ ವಿಜಯ್ ರಾಘವೇಂದ್ರ ಖಾಕಿ ತೊಟ್ಟು ಪೊಲೀಸ್ ಪಾತ್ರದಲ್ಲಿ ಮತ್ತೆ ಮಿಂಚಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಒಂದು ವಾರದೊಳಗೆ ನಡೆಯುವ ಎರಡು ಕೊಲೆ ಪ್ರಕರಣಗಳು, ಮುಂದಾಗಬಹುದಾದ ಮತ್ತೊಂದು ಕೊಲೆಯನ್ನು ತಡೆಯುವ ಜವಾಬ್ದಾರಿ ಹಾಗೂ ಕೊಲೆಗಾರನನ್ನು ಹಿಡಿಯುವ ಕಥಾನಾಯಕನ ಹೋರಾಟ ಚಿತ್ರದ ಮುಖ್ಯ ಕಥಾವಸ್ತುವಾಗಿದೆ. ನಟ ವಿಜಯ್ ರಾಘವೇಂದ್ರ ಅವರು, ಸೀತಾರಾಮ್ ಬಿನೋಯ್ ನನ್ನ ವೃತ್ತಿ ಜೀವನಕ್ಕೆ ವಿಶೇಷ ಬಲ ಕೊಟ್ಟ ಸಿನಿಮಾ. ಆ ಚಿತ್ರದ ಬರವಣಿಗೆ, ಪ್ರೆಸೆಂಟೇಷನ್ ಎಲ್ಲವೂ ಶಕ್ತಿ ನೀಡಿತ್ತು. ನಂತರ ಕೇಸ್ ಆಫ್ ಕೊಂಡಾಣ ಮಾಡಿದೆವು. ಬಳಿಕ ಈ ಇನ್ನೊಂದು ಸೀತಾರಾಮ್ ಮಾಡಿದ್ದೇವೆ. ದೇವಿ ಸರ್ ಒಳ್ಳೆ ಸ್ಕ್ರಿಪ್ಟ್ ಬರೆದಿದ್ದಾರೆ‌. ಸಾತ್ವಿಕ್ ಅದಕ್ಕೆ ಸಪೋರ್ಟ್ ಮಾಡಿದರು. ಇಡೀ ಚಿತ್ರತಂಡ ಸೇರಿಕೊಂಡು ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರ ಮಾಡಿದೆವು. ನವನೀತ್ ಶ್ಯಾಮ್ ಸಂಗೀತ ಚಿತ್ರದ ಜೀವಾಳ. ಚಿತ್ರ ಮಾಡೋದು ಎಷ್ಟೋ ಕಷ್ಟವೋ ಬಿಡುಗಡೆ ಕೂಡ ಕಷ್ಟ. ನಮಗೆ ಈ ಚಿತ್ರಕ್ಕೆ ಪವನ್ ಸರ್ ಬೆಂಬಲವಾಗಿ ನಿಂತಿದ್ದಾರೆ. ಚಿತ್ರ ನೋಡಿ ಜೊತೆಗೆ ನಿಲ್ಲೋದಾಗಿ ಹೇಳಿದರು. ಕೇವಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಹೇಳಿದರು.

seconds 1

ನಿರ್ದೇಶಕ ಕಂ ಪವನ್ ಒಡೆಯರ್ ಮಾತನಾಡಿ, ಸೀತಾರಾಮ್ ಬಿನೋಯ್ ಟ್ರೆಂಡ್ ಸೆಟ್ ಮಾಡಿದ ಚಿತ್ರ. ಬರವಣಿಗೆ, ಟೇಕಿಂಗ್, ಪ್ರೆಸೆಂಟೆಷನ್ ಎಲ್ಲವೂ ಚೆನ್ನಾಗಿತ್ತು. ಅದರ ಮುಂದುವರೆದ ಭಾಗ ಸೆಕೆಂಡ್ ಕೇಸ್ ಸೀತಾರಾಮ್. ನಿರ್ದೇಶಕರು ಹಾಗೂ ನಿರ್ಮಾಪಕರು ಇಬ್ಬರು ಫ್ಯಾಷನೇಟೆಡ್. ಸಿನಿಮಾವನ್ನು ಹೋಮ್ ವರ್ಕ್ ಮಾಡಿದ ರೀತಿ ಮಾಡಿ ಕೆಲಸ ಮಾಡಿದ್ದಾರೆ. ಸಿನಿಮಾ ಮೇಲೆ ಇಡೀ ತಂಡಕ್ಕೆ ತುಡಿತ ಇದೆ. ರಫ್ ಕಟ್ ನೋಡಿದಾಗ ಬಹಳ ಇಷ್ಟವಾಯ್ತು. ಈ ಚಿತ್ರವನ್ನು ಪ್ರೆಸೆಂಟ್ ಮಾಡಲು ತುಂಬಾ ಖುಷಿ ಇದೆ. ಬೇರೆ ಭಾಷೆಗಳ ಸಸ್ಪೆನ್ಸ್ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ ಈ ಚಿತ್ರ ಒಂದು ಹೆಜ್ಜೆ ಮುಂದೆ ಇದೆ. ಈ ಸಿನಿಮಾದ ಬಗ್ಗೆ ಹೇಳುವ ಬದಲು ಎಕ್ಸ್ ಪಿರಿಯನ್ಸ್ ಮಾಡಬೇಕು ಎಂದು ಅನುಭವ ಹಂಚಿಕೊಂಡರು.
‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ಗೋಪಾಲ್ ಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಪವನ್ ಒಡೆಯರ್ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ದೇವಿ ಪ್ರಸಾದ್ ಶೆಟ್ಟಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಫ್ಲೈಯಿಂಗ್ ಎಲಿಫಂಟ್ ಸ್ಟೋರಿ ಟೆಲ್ಲರ್ಸ್’ ಸಿನಿಮಾ ಮೂಲಕ ದೇವಿ ಪ್ರಸಾದ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಬಾರ್ ಈ ಚಿತ್ರ ನಿರ್ಮಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ