ಸರಸ್ವತಿ*
ವಿಜಯ ರಾಘವೇಂದ್ರ ನಟನೆಯ ಹೊಸ ಸಿನಿಮಾ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ದ ಟೀಸರ್ ಬಿಡುಗಡೆಯಾಗಿದೆ. ನಟಿ ಭಾವನ ಮೆನನ್, ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್ , ಉನ್ನಿ ಮುಕುಂದ್ ಹಾಗೂ ನವೀನ್ ಶಂಕರ್ ಸೋಷಿಯಲ್ ಮೀಡಿಯಾದಲ್ಲಿ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟೀಸರ್ ನ್ನು ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.
ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಸಿನಿಮಾದ ಟೀಸರ್ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ. ವಿಜಯ್ ರಾಘವೇಂದ್ರ, ಪೊಲೀಸ್ ಅಧಿಕಾರಿಯಾಗಿ ಮತ್ತೊಂದು ಪ್ರಕರಣವನ್ನು ಇಲ್ಲಿ ಕೈಗೆತ್ತಿಕೊಂಡಿದ್ದಾರೆ.
2021ರಲ್ಲಿ ತೆರೆಕಂಡ ವಿಜಯ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯ್’ ಸಿನಿಮಾದ ಸೀಕ್ವೆಲ್ ಇದಾಗಿದೆ. ಇದರಲ್ಲಿ ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದ ವಿಜಯ ರಾಘವೇಂದ್ರ ಬಳಿಕ ‘ಸೀತಾರಾಮ್ ಬಿನೋಯ್’ನಲ್ಲಿ ನಟಿಸಿದ್ದರು. ಇದನ್ನು ದೇವಿಪ್ರಸಾದ್ ಶೆಟ್ಟಿ ಅವರೇ ನಿರ್ದೇಶಿಸಿದ್ದರು. ಇದೀಗ ಮತ್ತೊಮ್ಮೆ ದೇವಿ ಪ್ರಸಾದ್ ಶೆಟ್ಟಿ ಜೊತೆ ಸಿನಿಮಾ ಮಾಡಿದ್ದಾರೆ.

ದೇವಿಪ್ರಸಾದ್ ಅವರೇ ಈ ಸಿನಿಮಾದ ಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿ ಸಾತ್ವಿಕ್ ಹೆಬ್ಬಾರ್ ಜೊತೆ ಕೈಜೋಡಿಸಿದ್ದಾರೆ. ನಿರ್ದೇಶಕ ಪವನ್ ಒಡೆಯರ್ ಸಿನಿಮಾವನ್ನು ಪ್ರಸ್ತುಪಡಿಸಲಿದ್ದಾರೆ.
ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರಕ್ಕೆ ಹೇಮಂತ್ ಆಚಾರ್ ಛಾಯಾಗ್ರಹಣ, ನವನೀತ್ ಶ್ಯಾಮ್ ಸಂಗೀತ ನಿರ್ದೇಶನ, ಶಶಾಂಕ್ ನಾರಾಯಣ್ ಸಂಕಲನ, ಭವಾನಿ ಶಂಕರ್ ಕಲಾ ನಿರ್ದೇಶನವಿದೆ.





