ವಿಭಾ*
ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ ‘ಸೆಪ್ಟೆಂಬರ್ 10’ ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.
ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಎಲ್ಲ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ, ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.
ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಹಿರಿಯನಟ ಶಶಿಕುಮಾರ್, ರಮೇಶ್ ಭಟ್, ಶ್ರೀರಕ್ಷಾ, ಶಿವಕುಮಾರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೆಜಿ.ಕೃಷ್ಣ ಚಿತ್ರದ ಛಾಯಾಗ್ರಾಹಕರು. ಮ್ಯೂಸಿಕ್ ಬಜಾರ್ ಮೂಲಕ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ