ಸರಸ್ವತಿ ಜಾಗೀರ್ದಾರ್*

*ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನದ ಈ ಚಿತ್ರದ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ.** .

1000690616

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಹಾಗೂ ವಿಶ್ವವೇ ಎದುರು ನೋಡುತ್ತಿರುವ, ಬಹು ನಿರೀಕ್ಷಿತ "ಕಾಂತಾರ ಅಧ್ಯಾಯ ೧" ಚಿತ್ರ ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಸೆಪ್ಟೆಂಬರ್ 22 ರ ಸೋಮವಾರ ಮಧ್ಯಾಹ್ನ 12:45ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಟ್ರೇಲರ್ ಅನಾವರಣವಾಗಲಿದೆ. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ಅನ್ನು ಶಿವಕಾರ್ತಿಕೇಯನ್, ಮಲಯಾಳಂನ ಟ್ರೇಲರ್ ಅನ್ನು ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯ ಟ್ರೇಲರ್ ಅನ್ನು ಪ್ರಭಾಸ್ ಅವರು ಅನಾವರಣ ಮಾಡಲಿದ್ದಾರೆ. ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ "ಕಾಂತಾರ" ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ.
1000690618

ಚಿತ್ರ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಮೇಕಿಂಗ್ ವಿಡಿಯೋ, ಪೋಸ್ಟರ್ ಗಳಿಗೆ ಫಿದಾ ಆಗಿರುವ ಅಭಿಮಾನಿಗಳು ಅಕ್ಟೋಬರ್ 2ರಂದು ಬಿಡುಗಡೆಯಾಗಲಿರುವ ಈ ಚಿತ್ರವನ್ನು ತೆರೆಯ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

1000690620

ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ, ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ ಅವರ ವಸ್ತ್ರ ವಿನ್ಯಾಸ "ಕಾಂತಾರ" ಚಿತ್ರಕ್ಕಿದೆ.

1000690624

ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

'ಕಾಂತಾರ ಅಧ್ಯಾಯ 1' ಚಿತ್ರವು ಕಲೆ, ಭಕ್ತಿ ಮತ್ತು ಶಕ್ತಿಯನ್ನು ಒಳಗೊಂಡಿರುವ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊಂದು ಅದ್ಭುತ ಚಿತ್ರ ವಿಶ್ವದ ಸಿನಿಪ್ರೇಮಿಗಳಿಗೆ ಜನರಿಗೆ ವೀಕ್ಷಿಸಲು ಸಿಗುವುದಂತೂ ಖಂಡಿತ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ