- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಕಿರುತೆರೆಯಲ್ಲಿ ಗೊಂಬೆ, ಬಿಗ್ಬಾಸ್ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕನ್ನಡದ ಸ್ಟಾರ್ ದಂಪತಿ ತಮ್ಮ ಮುದ್ದಾದ ಮಗಳಿಗೆ ನಾಮಕರಣ ಮಾಡಿದ್ದಾರೆ. ನಟಿ ನೇಹಾ ಗೌಡ ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಹಾಲ್ವೊಂದರಲ್ಲಿ ನಾಮಕರಣ ಶಾಸ್ತ್ರ ಮಾಡಿದ್ದಾರೆ. ಈ ನಾಮಕರಣ ಶಾಸ್ತ್ರದಲ್ಲಿ ಕಿರುತೆರೆಯ ಕಲಾವಿದರು, ಕುಟುಂಬಸ್ಥರು, ಆತ್ಮೀಯರು ಹಾಗೂ ಸ್ನೇಹಿತರು ಭಾಗವಹಿಸಿದ್ದರು. ನೇಹಾ ಗೌಡ ದಂಪತಿ. ತಮ್ಮ ಮಗಳಿಗೆ ಶಾರದ ಎಂದು ಹೆಸರನ್ನಿಟ್ಟಿದ್ದಾರೆ.
ಇತ್ತೀಚೆಗೆ ಎಲ್ಲರೂ ತಮ್ಮ ಮಗುವಿಗೆ ನಾಮಕರಣ ಮಾಡುವಾಗ ಫ್ಯಾನ್ಸಿ ಹೆಸರನ್ನು ಹುಡಕಲು ಬಯಸುತ್ತಾರೆ. ಎಲ್ಲೂ ಕೇಳಿರದ ಹೆಸರುಗಳನ್ನು ಇಡಲು ಆದ್ಯತೆ ನೀಡುತ್ತಾರೆ. ಈಗ ನೇಹಾ ಗೌಡ ಅವರು ತುಂಬಾನೇ ಸಾಂಪ್ರದಾಯಿಕ ಹೆಸರಿಟ್ಟು ಗಮನ ಸೆಳೆದಿದ್ದಾರೆ. ನೇಹಾ ಗೌಡ ಅವರು ತಮ್ಮ ಮಗಳಿಗೆ ಶಾರದಾ ಎಂದು ನಾಮಕರಣ ಮಾಡಿದ್ದಾರೆ. ಈ ಹೆಸರನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡೋ ಈ ಸಮಯದಲ್ಲಿ ನೇಹಾ ಗೌಡ ಅವರು ಸಾಂಪ್ರದಾಯಿಕ ಹೆಸರಿಟ್ಟಿದ್ದಾರೆ.
ಶಾರದೆ ಎಂಬುದು ವಿದ್ಯಾ ದೇವತೆಯ ಹೆಸರು. ಅವರು ಈ ಹೆಸರನ್ನು ಇಟ್ಟಿದ್ದಕ್ಕೆ ಅನೇಕರು ಖುಷಿಪಟ್ಟಿದ್ದಾರೆ. ‘ಹೆಸರು ಸಾಂಪ್ರದಾಯಿಕವಾಗಿದೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ‘ಎಲ್ಲರೂ ಫ್ಯಾನ್ಸಿ ಹೆಸರಿನ ಹಿಂದೆ ಓಡುತ್ತಿದ್ದಾರೆ. ಆದರೆ, ನೀವು ಮಾತ್ರ ಈ ರೀತಿಯ ಒಳ್ಳೆಯ ಹೆಸರನ್ನು ಇಟ್ಟಿದ್ದೀರಿ. ಇದು ನಿಜಕ್ಕೂ ಖುಷಿಯ ವಿಚಾರ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಇನ್ನಷ್ಟು ಮಗಳ ಫೋಟೋ ಹಂಚಿಕೊಳ್ಳಲು ಕೋರಿದ್ದಾರೆ.
ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆಗಿದ್ದಾರೆ. ನಟಿ ನೇಹಾ ಗೌಡ ಅವರು ಲಕ್ಷ್ಮೀ ಬಾರಮ್ಮ ಸೀರಿಯಲ್‌ನಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು.
ಗೊಂಬೆ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಂದನ್ ಗೌಡ ಅವರು ಕಲರ್ಸ್ ಕನ್ನಡದಲ್ಲಿ ಮೂಡಿ ಬರುತ್ತಿರೋ ಅಂತರಪಟ ಸೀರಿಯಲ್ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದರು.
ಅಕ್ಟೋಬರ್ 29ರಂದು ನಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರವೇ ಇದ್ದಾರೆ. ಅವರು ಮತ್ತೆ ಕಿರುತೆರೆಗೆ ಬರಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.