- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಕಿರುತೆರೆ ನಟಿ, ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ಕಳೆದ ಜುಲೈ 4ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹನುಮಂತ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಮುನೇಶ್ವರ ಲೇಔಟ್ನಲ್ಲಿ ಘಟನೆ ನಡೆದಿದೆ. ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ಗಳಲ್ಲಿ ಬಣ್ಣ ಹಚ್ಚಿರುವ ಶ್ರುತಿ, 20 ವರ್ಷದ ಹಿಂದೆ ಅಮರೇಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದು, ಹನುಮಂತ ನಗರದಲ್ಲಿ ಲೀಸ್ಗೆ ಮನೆ ಪಡೆದು ದಂಪತಿ ವಾಸವಿದ್ದರು.
ಇತ್ತೀಚೆಗೆ ಶ್ರುತಿ ನಡವಳಿಕೆ ಗಂಡ ಅಮರೇಶ್ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿದ್ದಳು. ಕಳೆದ ಏಪ್ರಿಲ್ನಲ್ಲಿ ಶ್ರುತಿ ಗಂಡನಿಂದ ದೂರಾಗಿದ್ದು, ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಜಗಳ ಸಹ ನಡೆದಿತ್ತು. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಗೆ ಶ್ರುತಿ ದೂರು ನೀಡಿದ್ದಳು.
ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಇಬ್ಬರು ಒಂದಾದ ಮಾರನೇ ದಿನವೇ ಹೆಂಡತಿಗೆ ಪತಿ ಅಮರೇಶ್ ಚಾಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಶ್ರುತಿಗೆ ಹಲ್ಲೆ ಮಾಡಿದ್ದಾನೆ. ಪೆಪ್ಪರ್ ಸ್ಪ್ರೇ ಹೊಡೆದು ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಇರಿದು ಹೆಂಡತಿಯ ಕೊಲೆಗೆ ಯತ್ನಿಸಿದ್ದಾನೆ. ಸಿನಿಮಾ ಸ್ಟೈಲ್ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಜೀವ ತೆಗೆಯಲು ಪ್ರಯತ್ನಿಸಿದ್ದಾನೆ.
With Regardsಸದ್ಯ ಘಟನೆ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರೋದಾಗಿ ಶ್ರುತಿ ದೂರು ನೀಡಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಿ ಆರೋಪಿ ಅಮರೇಶ್ನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಟಿ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
RAGHAVENDRA ADIGA H.N.