- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗದ ನಟಿ ಹಾಗೂ ಬಿಗ್ ಬಾಸ್ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಜೀವನದ ಬಗ್ಗೆ ಮಹತ್ವದ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. ನಟಿ ಶುಭಾ ಪೂಂಜಾ ಮತ್ತು ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ಗೆ ಜಂಟಿ ಅರ್ಜಿ ಸಲ್ಲಿಸಿರುವುದು ತಿಳಿದುಬಂದಿದೆ.

‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಈ ಜೋಡಿ ಸಾಕಷ್ಟು ಬಾರಿ ಒಟ್ಟಿಗೆ ಕಾಣಿಸಿಕೊಂಡಿತ್ತು.

ಆದರೆ ಇದೀಗ ಇಬ್ಬರೂ ದಾಂಪತ್ಯ ಸಂಬಂಧ ಅಂತ್ಯಗೊಳಿಸಲು ನಿರ್ಧರಿಸಿದ್ದು, ಪರಸ್ಪರ ಒಪ್ಪಿಗೆಯ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ವೇಳೆ ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

ವಿಚ್ಛೇದನಕ್ಕೆ ಕಾರಣವೇನು ಎಂಬ ಬಗ್ಗೆ ದಂಪತಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಪತಿಯೊಂದಿಗೆ ಹಂಚಿಕೊಂಡಿದ್ದ ಹಲವು ಫೋಟೋಗಳನ್ನು ಶುಭಾ ಪೂಂಜಾ ತೆಗೆದುಹಾಕಿರುವುದು ಗಮನ ಸೆಳೆದಿದೆ.

ಕನ್ನಡದ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿ ಅಪಾರ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ತಮ್ಮ ಸರಳತೆ ಮತ್ತು ಮುಗ್ಧ ವ್ಯಕ್ತಿತ್ವದ ಮೂಲಕ ವೀಕ್ಷಕರ ಮೆಚ್ಚುಗೆ ಪಡೆದಿದ್ದರು. ಇದೀಗ ಅವರ ವೈಯಕ್ತಿಕ ಜೀವನದ ಈ ಬೆಳವಣಿಗೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ