ರಾಷ್ಟ್ರ ಪ್ರಶಸ್ತಿ ವಿಜೇತೆ, ಮಾಲಿವುಡ್​ನ ಖ್ಯಾತ ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ವಿಡಿಯೋಗಳು ಮತ್ತು ಜಾಹೀರಾತುಗಳಲ್ಲಿ ನಟಿಸಿದ್ದಾರೆ ಎಂಬ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ. ಲಾಭಕ್ಕಾಗಿ ವಯಸ್ಕರ ಸಿನಿಮಾಗಳು, ವೆಬ್‌ಸೈಟ್‌ಗಳು ಮತ್ತು ಅಶ್ಲೀಲ ಜಾಹೀರಾತುಗಳಲ್ಲಿ ಭಾಗವಹಿಸಿದ್ದಾರೆ ಎಂದು ದೂರಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಶ್ವೇತಾ ಮೆನನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಆದೇಶದಿಂದ ನಟಿ ಶ್ವೇತಾ ಮೆನನ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಸಾಮಾಜಿಕ ಕಾರ್ಯಕರ್ತ ಮಾರ್ಟಿನ್ ಮನಶೆರ್ ಸಲ್ಲಿಸಿದ ದೂರಿನಲ್ಲಿ, ಶ್ವೇತಾ ಮೆನನ್ ಹಣಕ್ಕಾಗಿ ಅಶ್ಲೀಲ ವಿಡಿಯೋಗಳು ಮತ್ತು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವಿಡಿಯೋಗಳನ್ನು ಅಶ್ಲೀಲ ವೆಬ್‌ಸೈಟ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ನಟಿಯ ಈ ಕೃತ್ಯಗಳು ಸಮಾಜದ ಮೇಲೆ, ವಿಶೇಷವಾಗಿ ಯುವ ಜನತೆ ಮತ್ತು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ ಎಂದು ಆರೋಪಿಸಲಾಗಿತ್ತು. ಈ ದೂರಿನ ಬೆನ್ನಲ್ಲೇ ಶ್ವೇತಾ ಮೆನನ್ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್ ವಿಜಿ ಅರುಣ್ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ, ನಟಿಯ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗಿದೆ.

ಶ್ವೇತಾ ಮೆನನ್​ ಮಾಲಿವುಡ್​ನ ಜನಪ್ರಿಯ ನಟಿಯಾಗಿ, ನಿರೂಪಕಿಯಾಗಿ ಮತ್ತು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಈ ಆರೋಪಗಳು ಕೇರಳದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿವೆ.

ಹಿಂದಿನ ರಾಜಕೀಯವೇನು?: ನಟಿಯ ವಿರುದ್ಧ ದಿಢೀರ್ ದೂರು ದಾಖಲಾಗಿರುವುದಕ್ಕೆ ರಾಜಕೀಯ ಒತ್ತಡವೇ ಕಾರಣ ಎಂದು ಶ್ವೇತಾ ಅವರ ಬೆಂಬಲಿಗರು ಆರೋಪಿಸಿದ್ದಾರೆ. ಮಲಯಾಳಂ ಚಲನಚಿತ್ರ ಸಂಘ (AMMA) ಅಧ್ಯಕ್ಷ ಸ್ಥಾನಕ್ಕೆ ಶ್ವೇತಾ ಸ್ಪರ್ಧಿಸುತ್ತಿರುವುದು ಈ ದೂರಿನ ಹಿಂದಿನ ಕಾರಣವಿರಬಹುದು ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ