- ರಾಘವೇಂದ್ರ ಅಡಿಗ ಎಚ್ಚೆನ್.

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿಯಲ್ಲಿ ಸಿದ್ದಾರ್ಥ ಪರಸನೂರು ಅವರು ವಾಸಿಸುತ್ತಿದ್ದರು. ಮೂರು ದಿನದ ಹಿಂದೆ ಅವರು ಮೃತಪಟ್ಟಿರುವ ಸಾಧ್ಯತೆ ಇದೆ. ಈಗ ಅವರ ಮೃತದೇಹ ಪತ್ತೆ ಆಗಿದೆ. ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿನ ಖಾಲಿ‌ ಜಾಗದಲ್ಲಿ ಮೃತ ದೇಹ ಪತ್ತೆ ಆಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ

ಸಿದ್ದಾರ್ಥ ಪರಸನೂರು ಅವರ ಮೃತ ದೇಹವನ್ನು ಗಮನಿಸಿದರೆ ಇದು ಸಹಜ ಸಾವಲ್ಲ ಎಂಬ ಅಭಿಪ್ರಾಯ ಮೇಲ್ನೋಟಕ್ಕೆ ಮೂಡುತ್ತದೆ. ಕರೆಂಟ್ ಹಿಡಿದು ಮೃತಪಟ್ಟಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹುಮ್ನಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನುಮಾನ ಬರುವ ರೀತಿಯಲ್ಲಿ ಶವ ಪತ್ತೆ ಆಗಿರುವುದರಿಂದ ಹುಮ್ನಾಬಾದ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ