- ರಾಘವೇಂದ್ರ ಅಡಿಗ ಎಚ್ಚೆನ್.

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹೃದಯಾಘಾತದಿಂದ ಹಠಾತ್ತನೆ ನಿಧನರಾಗಿದ್ದು, ಸಿನಿಮಾ ಲೋಕವನ್ನು ದುಃಖದಲ್ಲಿ ಮುಳುಗಿಸಿದೆ.
ಫಿಲಂ ಚೇಂಬರ್ನಲ್ಲಿ ನಡೆಯುತ್ತಿದ್ದ ಸಭೆಯೊಂದರಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆ ಉಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

cinema-director-joe-simon-is-no-more-1-2026-02-13-17-51-41

1977 ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದ ಜೋ ಸೈಮನ್ ಮೊದಲು ನಿರ್ದೇಶಿಸಿದ್ದು ‘ಒಂದು ಪ್ರೇಮದ ಕತೆ’, ಕನ್ನಡಕ್ಕೆ ಹಲವಾರು ಆಕ್ಷನ್ ಮತ್ತು ಪ್ರೇಮಕತಾ ಸಿನಿಮಾಗಳನ್ನು ಜೋ ಸೈಮನ್ ನೀಡಿದ್ದಾರೆ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿದ್ದ ಜೋ ಸೈಮನ್, ‘ಸಿಂಹ ಜೋಡಿ’, ‘ಸಾಹಸ ಸಿಂಹ’, ‘ಹಾಂಕಾಂಗ್​​ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ‘ಟೈಂ ಬಾಂಬ್’ ಇನ್ನೂ ಹಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಮೂಲತಃ ಮಂಡ್ಯದವರಾಗಿದ್ದ ಜೋ ಸೈಮನ್, ಹಲವಾರು ಸಿನಿಮಾ ನಿರ್ದೇಶನ, ನಟನೆ ಮಾಡುವ ಜೊತೆಗೆ ಸಿನಿಮಾ ಸಂಬಂಧಿ ಸಂಘ-ಸಂಸ್ಥೆಗಳಲ್ಲಿಯೂ ಸಕ್ರಿಯರಾಗಿದ್ದರು. ಕನ್ನಡ ಚಲನಚಿತ್ರ ಸಂಘದಲ್ಲಿ ಕೆಲ ಪ್ರಮುಖ ಹುದ್ದೆಗಳನ್ನು ಸಹ ಅವರು ನಿಭಾಯಿಸಿದ್ದರು. ಇಂದು (ಫೆಬ್ರವರಿ 13) ಸಹ ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ಅವರು ಬದುಕುಳಿಯಲಿಲ್ಲ.
1946ರಲ್ಲಿ ಜನಿಸಿದ ಜೋ ಸೈಮನ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಕುಟುಂಬದಲ್ಲಿ ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಾಳೆ ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಚಿತ್ರರಂಗದ ಹಿರಿಯರು, ನಟರು, ತಾಂತ್ರಿಕರು ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ. ‘ಸೈಮನ್ ಸರ್‌ ಅವರ ಸರಳತೆ ಮತ್ತು ಕೆಲಸದ ಶಿಸ್ತು ಮರೆಯಲಾಗದು’ ಎಂದು ಹಲವರು ನೆನಪಿಸಿಕೊಂಡಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ