ಜಾಗೀರ್ದಾರ್*

ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ.

Sudheer

ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಏಳುಮಲೆ ಚಿತ್ರದ ಕಾಪಾಡೋ ದ್ಯಾವ್ರೇ ಎಂಬ ಗೀತೆ ಅನಾವರಣ ಮಾಡಲಾಯಿತು. ಚಿತ್ರರಂಗದ ಹಿರಿಯ ನಟಿಯರಾದ ಶೃತಿ, ಸುಧಾರಾಣಿ, ಹಾಗೂ ತಾರಾ ಅನುರಾಧ ಹಾಡನ್ನು ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ತರುಣ್ ಸುಧೀರ್, ನಿರ್ದೇಶಕ ಪುನೀತ್ ರಂಗಸ್ವಾಮಿ, ನಾಯಕ ರಾಣಾ, ನಾಯಕಿ ಪ್ರಿಯಾಂಕಾ, ಸಂಗೀತ ನಿರ್ದೇಶಕ ಡಿ‌ ಇಮ್ಮಾನ್, ಗಾಯಕಿ‌ ಮಂಗ್ಲಿ, ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿರುವ ರಾಜುಗೌಡ್ರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾರಮ್ಮ ಮಾತನಾಡಿ, ಹಾಡು ನೋಡಿ ತುಂಬಾ ಖುಷಿಯಾಯ್ತು. ಸಣ್ಣದಾಗಿ ದುಃಖ ಆಯ್ತು. ಎಲ್ಲಿ ಪ್ರೇಮಿಗಳನ್ನು ಬಹಳ ಕಷ್ಟಪಡುವುದು ತೋರಿಸುತ್ತಾರೆ ಎಂದು. ಇದು ಸತ್ಯಕಥೆ ಅಂದಾಗ ಅದು ಹಾಗೇಯೇ ತೋರಿಸಬೇಕು. ರಾಣಾ, ಪ್ರಿಯಾಂಕಾ ತುಂಬಾ ಚೆನ್ನಾಗಿ ಕಾಣಿಸುತ್ತಾರೆ. ಡೈರೆಕ್ಟರ್ ತಮ್ಮ ಕೆಲಸ ಮಾಡಿದ್ದಾರೆ. ತರುಣ್ ಸುಧೀರ್ ಏನ್ ಮಾಡಿದ್ರೂ ಫಸ್ಟ್ ಕ್ಲಾಸ್ ಆಗಿದೆ ಅನ್ನೋದು ಫ್ರೋವ್ ಆಗಿದೆ. ಸಾಂಗ್ ಚೆನ್ನಾಗಿದೆ. ಸಿನಿಮಾ ಹಿಟ್ ಆಗಲಿ ಎಂದು ಹಾರೈಸಿದರು.

Sudheer 2

ಶೃತಿ ಮಾತನಾಡಿ, ಏಳುಮಲೆ ಸಿನಿಮಾ ನೋಡಿ ಪ್ರೇಕ್ಷಕರು ಹೊರಗೆ ಬಂದಾಗ ರಾಣಾ ಸಖತ್ ಆಗಿ ಆಕ್ಟ್ ಮಾಡಿದ್ದಾರೆ ಎಂದು ಹೇಳ್ತಾರೆ. ಒಬ್ಬ ಕಲಾವಿದನಾಗಿ ಹೆಸರು ಮಾಡುವ ಅವಕಾಶ ಈ ಚಿತ್ರದಲ್ಲಿ ರಾಣಾಗೆ ಸಿಕ್ಕಿದೆ. ಪ್ರಿಯಾಂಕಾ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಇದು ನನ್ನ ಕುಟುಂಬದ ಸಿನಿಮಾ. ನಾವು ಬೆಂಗಳೂರಿಗೆ ಬರಲು ಕಾರಣ ಸುಧೀರ್ ಸರ್. ಹೊಸಬರಿಗೆ ಯಾರು ಅವಕಾಶ ಕೊಡ್ತಾರೆ ಎಂಬ ಭಯ ಹೋಗಲಾಡಿಸಲು ಚಿತ್ರರಂಗದಲ್ಲಿ ತರುಣ್ ತರಹದ ಡೈರೆಕ್ಟರ್ ಇದ್ದಾರೆ. ಹೊಸಬರಿಗೆ ಅವಕಾಶ ಕೊಡುವುದು ಚಿಕ್ಕ ವಿಷಯವಲ್ಲ. ಅದನ್ನು ತರುಣ್ ಮಾಡುತ್ತಿದ್ದಾನೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಟಿ ಸುಧಾರಾಣಿ ಮಾತನಾಡಿ, ಕನ್ನಡ ಚಿತ್ರರಂಗಕ್ಕೆ ಮತ್ತೆ ಅದೇ ಹೊಳಪು, ಮೆರಗು ಏಳುಮಲೆ ಸಿನಿಮಾದ ಟೀಸರ್ ಹಾಡು ನೋಡಿದಾಗ ಸಿಗುತ್ತಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿ. ಇಡೀ ತಂಡದ ಡೆಡಿಕೇಷನ್ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಕಲಾ ಸರಸ್ವತಿ ಎಲ್ಲರನ್ನೂ ಕೈಬೀಸಿ ಕರೆಯಲ್ಲ. ಕರೆದಾಗ ಅದನ್ನು ಭಕ್ತಿ, ‌ನಿಷ್ಠೆಯಿಂದ ಮುಂದುವರೆಸಬೇಕು. ಆ ಅವಕಾಶ ರಾಣಾ, ಪ್ರಿಯಾಂಕಾಗೆ ಸಿಕ್ಕಿದೆ. ಇದನ್ನು ನೀವು ಸದುಪಯೋಗಪಡಿಸಿಕೊಂಡಿದ್ದಾರೆ. ತರುಣ್ ಅವರು ತಂದೆ ಹೆಸರನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಟನೆ, ನಿರ್ದೇಶನ ಎರಡರಲ್ಲಿಯೂ ಹೆಸರು ಮಾಡಿದ್ದಾರೆ. ಈಗ ನಿರ್ಮಾಪಕರಾಗಿ ಒಳ್ಳೊಳ್ಳೆ ಸಿನಿಮಾ ಮಾಡುತ್ತಿದ್ದಾರೆ ಎಂದು ಹೇಳಿದರು.

ಡಿ‌ ಇಮ್ಮಾನ್ ಮಾತನಾಡಿ, ಈ‌ ಮೊದಲು ಸುದೀಪ್ ಸರ್ ಹಾಗೂ ಪುನೀತ್ ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಈಗ ತರುಣ್ ಸುಧೀರ್ ಅವರ ಸಿನಿಮಾದ ಭಾಗವಾಗಿದ್ದೇನೆ. ತರುಣ್ ಅದ್ಭುತ ವ್ಯಕ್ತಿ. ನಾನು ಅವರ ಮೂಲಕ ನಿರ್ದೇಶಕ ಪುನೀತ್ ಸರ್ ಭೇಟಿಯಾದೆ. ಏಳುಮಲೆ ಒಂದು ಸುಂದರ ಪ್ರೇಮಕಥೆ. ಈ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಚೆನ್ನಾಗಿ ನಟಿಸಿದ್ದಾರೆ. ನಾನು ಚಿತ್ರಕ್ಕಾಗಿ ಸಂಗೀತ ನಿರ್ದೇಶನ ಮಾಡಿದ್ದೇನೆ. ಈ ಜರ್ನಿಯನ್ನು ತುಂಬಾ ಎಂಜಾಯ್ ಮಾಡಿದೆ.‌ ನಾನು ಸಿನಿಮಾ ನೋಡಿದ ಬಳಿಕ ಯಾರು ಕ್ಯಾಮೆರಾಮೆನ್ ಎಂದು ಕೇಳಿದೆ. ಅದ್ವೈತ್ ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ