ಜಾಗೀರ್ದಾರ್* .

ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಮಿಥುನ್ ರೈ ಅವರು ಆಯೋಜಿಸಿದ್ದ “ಪಿಲಿನಲಿಕೆ” ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕಲಾವಿದರಾದ ಕಿಚ್ಚ ಸುದೀಪ್, ಸುನೀಲ್ ಶೆಟ್ಟಿ, ಝೈದ್ ಖಾನ್, ಪೂಜಾ ಹೆಗ್ಡೆ, ಕ್ರೀಡಾಪಟುಗಳಾದ ಅಜಿಂಕ್ಯ ರಹಾನೆ, ಜಿತೇಶ್ ಶರ್ಮ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಪಿಲಿನಲಿಕೆ” (ಹುಲಿ ನೃತ್ಯ)ವನ್ನು ಒಂದು ತಂಡದ ನೃತ್ಯವನ್ನು ಕಂಡು ವೀಕ್ಷಿಸಿ ಬಹಳ ಸಂತೋಷಪಟ್ಟ ನಟ ಝೈದ್ ಖಾನ್ ಅವರು

Sunil 1

ಸ್ಥಳದಲ್ಲೇ ಆ ತಂಡಕ್ಕೆ ಎರಡು ಲಕ್ಷ ರೂಪಾಯಿಗಳ ಬಹುಮಾನ ಘೋಷಣೆ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು ಹಾಗೂ ತುಂಬಾ ಸೊಗಸಾಗಿ ಹುಲಿನೃತ್ಯ ಮಾಡಿದ ಹುಡುಗನ ಪ್ರತಿಭೆಗೆ ಮನಸೋತ ಝೈದ್ ಖಾನ್ ಅವರು ಆ ಹುಡುಗನಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಪ್ರಸ್ತುತ ಝೈದ್ ಖಾನ್ ಅವರು ನಾಯಜಕನಾಗಿ ನಟಿಸುತ್ತಿರುವ “ಕಲ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಪ್ರೇಕ್ಷಕರ ಮನ ಗೆದ್ದಿದೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ