- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ "ತದ್ವಿರುದ್ಧ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಹಿಂದೆ ‘ಯಶೋಗಾಥೆ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನೋದ್ ರಾಜ್, ಇದೀಗ ಸದ್ದಿಲ್ಲದೆ ‘ತದ್ವಿರುದ್ಧ’ ಎಂಬ ಚಿತ್ರದೊಂದಿಗೆ ಬಂದಿದ್ದಾರೆ. ಈ ಚಿತ್ರದ ಟೀಸರ್ ಕಳೆದ ವರ್ಷವೇ ಬಿಡುಗಡೆಯಾಗಿದ್ದು, ಚಿತ್ರ ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.

ಸುಮನ್ ರಂಗನಾಥ್, ಸುಚೇಂದ್ರ ಪ್ರಸಾದ್, ವಿಕ್ರಂ, ಐಶ್ವರ್ಯ ಶೆಟ್ಟಿ ಮುಂತಾದವರು ನಟಿಸಿರುವ ಈ ಚಿತ್ರವನ್ನು ಚಾರ್ಮಿಯನ್ ಮೋಷನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದ್ದು, ಇತ್ತೀಚೆಗೆ ಲಹರಿ ಆಡಿಯೋ ಚಾನಲ್‍ನಲ್ಲಿ ಟೀಸರ್ ಬಿಡುಗಡೆ ಆಗಿದೆ. ಸಕಲೇಶಪುರದಲ್ಲೇ ಪೂರ್ತಿ ಚಿತ್ರೀಕರಣ ನಡೆದಿದೆ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರು ಸಹಕಾರ ನೀಡಿದ್ದಾರೆ. ಹಾಡಿಲ್ಲದ ಈ ಚಿತ್ರದಲ್ಲಿ ಹಿನ್ನೆಲೆ ಸಂಗೀತವೇ ಹೈಲೆಟ್
ಇದೊಂದು ಮರ್ಡರ್ ಮಿಸ್ಟ್ರಿ ಚಿತ್ರವಾಗಿದ್ದು, ಕೆಲವೇ ಪಾತ್ರಗಳು ಸುತ್ತ ಸುತ್ತುತ್ತದಂತೆ. ಇದು 90ರ ಕಾಲಘಟ್ಟದಲ್ಲಿ ಸಕಲೇಶಪುರದಲ್ಲಿ ನಡೆಯುವ ಕಥೆಯಾಗಿದ್ದು, ಈ ಚಿತ್ರಕ್ಕೆ ವಿನೋದ್ ರಾಜ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಛಾಯಾಗ್ರಹಣ ಮಾಡಿ, ಹಿನ್ನೆಲೆ ಸಂಗೀತ ಸಂಯೋಜಿಸಿ, ಸಂಕಲನವನ್ನೂ ಮಾಡಿದ್ದಾರೆ.





