Sj*

ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ಆದಿತ್ಯ ನಾಯಕರಾಗಿ ನಟಿಸಿರುವ, ಸಿಲ್ಕ್ ಮಂಜು,‌ ರವಿ ಹಾಗೂ ಸ್ಮಿತಾ ವಸಿಷ್ಠ ಅವರು ಉಪ್ಪಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸಿರುವ ಹಾಗೂ ರಂಜನ್ ಶಿವರಾಮ್ ಗೌಡ ನಿರ್ದೇಶನದ "ಟೆರರ್" ಚಿತ್ರ ಈ ವಾರ ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಚಿತ್ರ ಎಲ್ಲರ ಗಮನ ಸೆಳೆದಿದೆ.

ರಂಜನ್ ಶಿವರಾಮ ಗೌಡ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ರಂಜನ್ ಅವರದೆ. ನವೀನ್ ಅಕ್ಷಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಕನಲ್ ಕಣ್ಣನ್ ಸಾಹಸ ನಿರ್ದೇಶನ ಹಾಗೂ ಭಾನು ಮಾಸ್ಟರ್, ಭೂಷಣ್ ಮಾಸ್ಟರ್ ಅವರ ನೃತ್ಯ ನಿರ್ದೇಶನವಿದೆ.

terror

ಆದಿತ್ಯ ಅವರು ಈ ಹಿಂದೆ ಅಭಿನಯಿಸಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. "ಟೆರರ್" ನಲ್ಲಿ ಗ್ಯಾಂಗ್ ಸ್ಟರ್ ಆಗಿ ಆದಿತ್ಯ ಕಾಣಿಸಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್, ರವಿ ಭಟ್, ಶಿವಾಂಗಿ, ಅಕ್ಷರ ಗೌಡ ಮುಂತಾದವರು ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ "ಟೆರರ್" ಚಿತ್ರದಲ್ಲಿದೆ..

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ