ಸರಸ್ವತಿ ಜಾಗೀರ್ದಾರ್*

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ ಹಾಗೂ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ "45" ಚಿತ್ರದ ಟೀಸರ್ ಯುಗಾದಿ ಹಬ್ಬದ ಶುಭದಿನದಂದು ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟೀಸರ್ ಅನಾವರಣ ಮಾಡಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

title 2

ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ಡಿ.ಕೆ.ಡಿ ರಿಯಾಲಿಟಿ ಶೋ ಮಾಡುತ್ತಿದ್ದ ಸಮಯದಲ್ಲಿ ಅರ್ಜುನ್ ಜನ್ಯ 4 ರಿಂದ 5 ನಿಮಿಷದಲ್ಲಿ ಈ ಚಿತ್ರದ ಕಥೆ ಹೇಳಿದರು. ಕಥೆ ಕೇಳಿ ಥ್ರಿಲ್ ಆದೆ. ಕಥೆ ಕೊಟ್ಟು ಬಿಡುತ್ತೇನೆ ಯಾರಾದರೂ ನಿರ್ದೇಶನ ಮಾಡಲಿ ಎಂದು ಅರ್ಜುನ್ ಜನ್ಯ ಹೇಳಿದರು. ನೀವು ಕಥೆ ಚೆನ್ನಾಗಿ ಹೇಳಿದ್ದೀರಾ. ನೀವೇ ನಿರ್ದೇಶನ ಮಾಡಿ ಅಂದೆ. ನಂತರ ನಿರ್ಮಾಣಕ್ಕೆ ನಿರ್ಮಾಪಕ ರಮೇಶ್ ರೆಡ್ಡಿ ಮುಂದಾದರು. "ಪ್ರೀತ್ಸೆ", "ಲವ ಕುಶ" ಚಿತ್ರಗಳಲ್ಲಿ ನಟ ಉಪೇಂದ್ರ ಜೊತೆ ನಟಿಸಿದ್ದೆ. ಈಗ ಮತ್ತೆ ಅವರೊಂದಿಗೆ ಅಭಿನಯಿಸಿದ್ದೇನೆ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ಇದು ಮೊದಲ ಚಿತ್ರ. ಎಲ್ಲಾ ಕಲಾವಿದ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ. ಟೀಸರ್ ನಲ್ಲೇ ಅರ್ಜುನ್ ಜನ್ಯ ಬಹಳ ಕುತೂಹಲ ಮೂಡಿಸಿದ್ದಾರೆ. ಚಿತ್ರ ಕೂಡ ಬಹಳ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. "45" ಚಿತ್ರ ಬರೀ ಕರ್ನಾಟಕದಲ್ಲಿ ಮಾತ್ರವಲ್ಲ. ಭಾರತದಾದ್ಯಂತ ಹೆಸರು ಮಾಡುವ ಚಿತ್ರವಾಗಲಿದೆ. ಈ ಚಿತ್ರವನ್ನು ಬೇರೆಯವರು ನಿರ್ದೇಶನ ಮಾಡಿದ್ದರೆ ಕನ್ನಡಕ್ಕೆ ಸಿಗುತ್ತಿದ್ದ ಒಳ್ಳೆಯ ನಿರ್ದೇಶಕನನ್ನು ಕಳೆದುಕೊಳ್ಳುತ್ತಿದ್ದೆವು ಎಂದರು

title 5

. ನಟ ಉಪೇಂದ್ರ ಮಾತನಾಡಿ, ಒಳ್ಳೆಯ ಕಥೆ ನೀವೇ ಮಾಡಿ ಎಂದು ಅರ್ಜುನ್ ಜನ್ಯಗೆ ಶಿವಣ್ಣ ಅವರು ಹೇಳಿದ್ದರ ಫಲ 45 ಚಿತ್ರ. ನಮ್ಮಲ್ಲಿಯೂ ಉತ್ತಮ ನಿರ್ದೇಶಕರು ಇದ್ದಾರೆ ಎನ್ನುವುದನ್ನು ನಾನೂ ಏನೂ ಮಾಡದಿದ್ದಾಗ ಹೇಳಿದವರು ಶಿವಣ್ಣ. ಅವರಿಂದ ಎಷ್ಟು ಜನ ನಿರ್ದೇಶಕರು ಬಂದಿದ್ಧಾರೆ. ಕೆಲವರು ಸೂಪರ್ ಸ್ಟಾರ್ ಆಗಿದ್ದಾರೆ. ಶಿವಣ್ಣ ಅಪರಂಜಿ. ಅರ್ಜುನ್ ಜನ್ಯ ಸಂಗೀತದಲ್ಲಿ ಸಿನಿಮಾ ಸೂಪರ್ ಹಿಟ್ ಮಾಡ್ತಾರೆ. ಇನ್ನೂ ಸಿನಿಮಾ ನಿರ್ದೇಶನ ಹೇಗೆ ಮಾಡಿರಬೇಕು ಊಹಿಸಿ ನೋಡಿ. ಅರ್ಜುನ್ ಜನ್ಯ ಅವರು ಬರೀ ಸಂಗೀತ ನಿರ್ದೇಶಕ ಮತ್ತು ನಿರ್ದೇಶಕ ಮಾತ್ರ ಅಲ್ಲ. ಒಳ್ಳೆಯ ನಟ ಕೂಡ.‌ ಪ್ರತಿಯೊಬ್ಬ ಕಲಾವಿದರಿಗೂ ಹೇಗೆ ನಟಿಸಬೇಕೆಂದು ಅವರು ಹೇಳುತ್ತಿರಲಿಲ್ಲ. ನಟಿಸಿ ತೋರಿಸುತ್ತಿದ್ದರು. ಇನ್ನೂ ಚಿತ್ರರಂಗಕ್ಕೆ ರಮೇಶ್ ರೆಡ್ಡಿ ಅವರಂತಹ ನಿರ್ಮಾಪಕರು ಬೇಕಾಗಿದ್ದಾರೆ. ಈ ಸಿನಿಮಾ ಖಂಡಿತಾ ಯಶಸ್ವಿಯಾಗುತ್ತದೆ. ಆದರೆ ರಾಜ್ ಬಿ ಶೆಟ್ಟಿ ಅವರು ಹೇಳಿದ ಹಾಗೆ ಮುಂದಿನ ಸಿನಿಮಾವನ್ನು ಅರ್ಜುನ್ ಜನ್ಯ ಅವರು ಇಲ್ಲೇ ಮಾಡಬೇಕು‌ ಎಂದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ