ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ Toxic: A Fairy Tale for Grown-Ups ಸಿನಿಮಾ ರಿಲೀಸ್ಗೆ ಸಿದ್ಧತೆ ನಡೆಸುತ್ತಿದೆ. 2026 ಮಾರ್ಚ್ 19 ರಂದು ಸಿನಿಮಾ ತೆರೆ ಕಾಣಲಿದ್ದು, ಇದೀಗ ಚಿತ್ರತಂಡ ನಟಿ ಕಿಯಾರ ಅಡ್ವಾಣಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಿದೆ.
ಟಾಕ್ಸಿಕ್ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ರಾಕಿಂಗ್ ಸ್ಟಾರ್ಗೆ ನಾಯಕಿ ಆಗಿರೋ ಕಿಯಾರಾ ಅಡ್ವಾಣಿ, ಸಿನಿಮಾದ ಪ್ರಮುಖ ಪಾತ್ರವಾಗಿರುವ ನಾಡಿಯಾ ಪಾತ್ರದಲ್ಲಿ ನಟಿಸುತ್ತಿದ್ದಾರೆ.
2026ರ ಮಾರ್ಚ್ 19ರಂದು ‘ಟಾಕ್ಸಿಕ್’ಸಿನಿಮಾ ಬಿಡುಗಡೆ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರದ ಪ್ರಚಾರ ಕಾರ್ಯ ಜೋರಾಗಿಯೇ ನಡೆದಿದೆ. ಇದೀಗ ಚಿತ್ರತಂಡ ಫಸ್ಟ್ಲುಕ್ ರಿಲೀಸ್ ಮಾಡಿದ್ದು, ಗ್ಲಾಮರಸ್ ಗೆಟಪ್ನಲ್ಲಿ ಕಿಯಾರಾ ಕಾಣಿಸಿಕೊಂಡಿದ್ದಾರೆ. ಸರ್ಕಸ್ ಬ್ಯಾಗ್ರೌಂಡ್ನಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಕಿಯಾರಾ ಮುಖದಲ್ಲಿ ಆತಂಕ ಕಂಡುಬಂದಿದೆ.
ಗೀತು ಮೋಹನ್ದಾಸ್ ನಿರ್ದೇಶಿಸಿರುವ ಈ ಚಿತ್ರವು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ.





