- ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ತಮ್ಮ ಕಾನೂನು ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿದ್ದಾರೆ. ಪ್ರಕರಣದ ವಿಚಾರಣೆಯ ಮಧ್ಯೆಯೇ ಹಳೆಯ ವಕೀಲರನ್ನು ಕೈಬಿಟ್ಟು ಹೊಸ ವಕೀಲರನ್ನು ನೇಮಿಸಿರುವ ದರ್ಶನ್, ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣದಲ್ಲಿ 60 ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಮರುಪರಿಶೀಲನೆಗಾಗಿ ದರ್ಶನ್ ಪರವಾಗಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ನಿಗದಿಪಡಿಸಿರುವ ಒಂದು ವರ್ಷದ ಅವಧಿಯನ್ನು ಕಡಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇದರ ನಡುವೆ ದರ್ಶನ್, ಲಕ್ಷ್ಮಣ್ ಹಾಗೂ ನಾಗರಾಜ್ ಸೇರಿದಂತೆ ಮೂವರು ಆರೋಪಿಗಳ ಪರ ವಾದಿಸುತ್ತಿದ್ದ ವಕೀಲ ಸುನೀಲ್ ಕುಮಾರ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿ ವಕಾಲತ್ತಿನಿಂದ ಹಿಂದೆ ಸರಿಯುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.

ವಿಚಾರಣೆ ವೇಳೆ ನ್ಯಾಯಾಲಯ, ಹಿರಿಯ ವಕೀಲ ಹಷ್ಮತ್ ಪಾಷಾ ಅವರು ದರ್ಶನ್ ಪರವಾಗಿ ಹೊಸದಾಗಿ ವಕಾಲತ್ತು ಸಲ್ಲಿಸಿರುವುದನ್ನು ದಾಖಲಿಸಿಕೊಂಡಿತು. ಪ್ರಕರಣದ ಎಲ್ಲಾ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಸೂಚನೆ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ಸುನೀಲ್ ಕುಮಾರ್ ಪರ ವಕೀಲರು, ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರ ಮೂಲಕ ಹಸ್ತಾಂತರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಪ್ರಕರಣದ ವಿಚಾರಣಾ ಪ್ರಕ್ರಿಯೆ ವೇಗ ಪಡೆದುಕೊಂಡಿರುವ ಹೊತ್ತಲ್ಲೇ ವಕೀಲರ ಬದಲಾವಣೆ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಹೊಸ ಅರ್ಜಿ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ