ಸರಿಗಮ ವಿಜಿ ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು, ಆದರೆ ಅದು ಸುಳ್ಳಾಗಿದೆ. ಸತತ ಚಿಕಿತ್ಸೆ ಬಳಿಕ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆಗೆ ಅಷ್ಟ್ರಲ್ಲಿ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.

ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಸಾಗಿದ ವಿಜಿ ಅವರು 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಹಲವು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ