ಸರಸ್ವತಿ ಜಾಗೀರ್ದಾರ್

ತಾರೆಯರ ಹುಟ್ಟು ಹಬ್ಬ ಅಂದಾಕ್ಷಣ ಮನೆ ಮುಂದೆ ಅಭಿಮಾನಿಗಳು ಸೇರೋದು ಕೇಕ್ ತರೋದು ತಮ್ಮ ಪ್ರೀತಿ ವ್ಯಕ್ತಪಡಿಸುವುದು ಸರ್ವೇ ಸಾಮಾನ್ಯ,. ಇತ್ತೀಚೆಗೆ  ಇಂತಹ ಸೆಲೆಬ್ರೇಷನ್ ಗಳಿಗೆ ತಾರೆಯರು ಹೆಚ್ಚು ಪ್ರೋತ್ಸಾಹ ಕೊಡದೆ ನೆರೆ ಹೊರೆಯವರಿಗೆ ತೊಂದರೆ ಕೊಡಬಾರದೆಂಬ ಉದ್ದೇಶದಿಂದ.. ತಮ್ಮ ಕೆಲಸದಲ್ಲಿ ನಿರತರಾಗಿ ಅಭಿಮಾನಿಗಳಲ್ಲಿ ವಿನಂತಿಸಿಕೊಳ್ಳುತ್ತಾರೆ.. ದುನಿಯಾ ವಿಜಯ್ ಕೂಡ ತಮ್ಮ ಅಭಿಮಾನಿಗಳಲ್ಲಿ ಪತ್ರ ಮುಖೇನ ಹಂಚಿಕೊಂಡಿದ್ದಾರೆ

ನನ್ನ ಪ್ರೀತಿಯ ಅಭಿಮಾನಿಗಳೇ....

ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ , ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ  ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ.‌ ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ.

ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ.

ಧನ್ಯವಾದಗಳು

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ